ರಾಖಿ ಕಟ್ಟಲು ಹೋದ ಬಾಲಕಿ ಮೇಲೆ ಗ್ಯಾಂಗ್ ರೇಪ್!

ಸೋಮವಾರ, 15 ಆಗಸ್ಟ್ 2022 (13:01 IST)
ಪಾಟ್ನಾ : ರಕ್ಷಾ ಬಂಧನ ಆಚರಿಸಲು ಅಣ್ಣನ ಮನೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬಿಹಾರದ ಸಿವಾನ್ನಲ್ಲಿ ನಡೆದಿದೆ.

ಬಾಲಕಿಯು ತನ್ನ ಸಹೋದರನಿಗೆ ರಾಖಿ ಕಟ್ಟಲು ಆತನ ಮನೆಗೆ ತೆರಳುತ್ತಿದ್ದಳು. ಈ ವೇಳೆ ನಾಲ್ವರು ಬಂದು ಆಕೆಯನ್ನು ಅಪಹರಿಸಿದ್ದಾರೆ. ನಂತರ ರಸ್ತೆಯ ಬದಿಯಲ್ಲಿರುವ ಪೊದೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.

ಬಾಲಕಿಯ ಕಿರುಚಾಟ ಕೇಳಿ ದಾರಿಹೋಕನೊಬ್ಬ ಸ್ಥಳಕ್ಕೆ ಆಗಮಿಸಿದ್ದಾನೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಜೊತೆಗೆ ಆಕೆಗೆ ಗಂಭೀರ ಗಾಯಗಳು ಆಗಿವೆ.

ಘಟನೆ ಸಂಬಂಧಿಸಿ ಪವನ್ ಕುಮಾರ್, ಅಂಕಿತ್ ಕುಮಾರ್, ಇಮಾಮುದ್ದೀನ್ ಮತ್ತು ದಿನೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ