ಅತ್ಯಾಚಾರಕ್ಕೊಳಗಾದ ಬಾಲಕಿಯ ಸಹೋದರ ಬೇರೊಬ್ಬ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ಸೇರಿಸಲಾಗಿತ್ತು. ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರು ಅತ್ಯಾಚಾರವೆಸಗಿರುವ ಸಹೋದರನ ತಂಗಿ ಮೇಲೆ ಸಂತ್ರಸ್ತೆಯ ಸಹೋದರ ಅತ್ಯಾಚಾರ ಮಾಡುವಂತೆ ಆದೇಶ ನೀಡಿದ್ದಾರೆ. ಹೀಗಾಗಿ ಕುಟುಂಬಸ್ಥರ ಎದುರೇ 16 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಲಾಗಿದೆ.