ವಾಷಿಂಗ್ಟನ್ : ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸುವ ಮೊದಲು ನೆರೆಯ ರಾಷ್ಟ್ರಗಳು ತಮ್ಮ ವ್ಯವಹಾರಗಳನ್ನು ನೋಡಿಕೊಳ್ಳಬೇಕು ಎಂದು ವಿಶ್ವಸಂಸ್ಥೆ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ನೀಡಿದೆ.
ಭಾರತವು ಜಮ್ಮು ಕಾಶ್ಮೀರವನ್ನು ವಶಪಡಿಸಿಕೊಂಡಿದೆ ಎಂದು ಪಾಕಿಸ್ತಾನವು ಆರೋಪಿಸಿತ್ತು. ಇದಕ್ಕೆ ಭಾರತ ವಿರೋಧ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ರುಚಿರಾ ಕಾಂಬೋಜ್ ಮಾತನಾಡಿ, ಪಾಕಿಸ್ತಾನದ ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದು ಅಪರಾಧವಾಗಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಂತಿ ಹಾಗೂ ಭದ್ರತೆಯ ಕುರಿತು ಮುಕ್ತ ಚರ್ಚೆಯಲ್ಲಿ ಈ ರೀತಿ ಹೇಳಿಕೆ ನೀಡಿದ್ದು ಹಾನಿಕರ ಹಾಗೂ ದಾರಿತಪ್ಪಿಸುವ ಕೆಲಸವಾಗಿದೆ ಎಂದು ಕಿಡಿಕಾರಿದರು.