ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ 36 ಕಿ.ಮೀ ರೋಡ್ ಶೋ ತಡೆ ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ವಿಜಯಕುಮಾರ್ ಎ. ಪಾಟೀಲ್ ಅವರ ಪೀಠವು ವಿಚಾರಣೆ ನಡೆಸಿ ರೋಡ್ ಶೋಗೆ ತಡೆಗೆ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥ ಮಾಡಿದರು.
ವಿಚಾರಣೆಯ ಸಂದರ್ಭದಲ್ಲಿ, ಭಾರತದಲ್ಲಿ ಚುನಾವಣೆಗಳನ್ನು ಹಬ್ಬದ ಆಚರಣೆಗಳೆಂದು ಪರಿಗಣಿಸಲಾಗಿದೆ. ಅಲ್ಲದೇ 1952 ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೇ ರ್ಯಾಲಿ ನಡೆಸಲಾಗಿದೆ. ಇದಲ್ಲದೆ,
ಕೇರಳ ಮತ್ತು ಕಲ್ಕತ್ತಾ ಹೈಕೋರ್ಟ್ಗಳು ಚುನಾವಣಾ ರ್ಯಾಲಿಗೆ ಅವಕಾಶ ನೀಡಿರುವುದನ್ನು ನಾವಿಲ್ಲಿ ಗಮನಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿತು.