ಹಿಜಬ್ ನಿಷೇಧ ಉಲ್ಲಂಘನೆ: ಅಮೆರಿಕ

ಶನಿವಾರ, 12 ಫೆಬ್ರವರಿ 2022 (11:33 IST)
ನ್ಯೂಯಾರ್ಕ್ : ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಹಿಜಬ್ ಧರಿಸುವುದನ್ನು ನಿಷೇಧಿಸಿರುವುದು ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ.

ಕರ್ನಾಟಕವು ಧಾರ್ಮಿಕ ಉಡುಪುಗಳ ಅನುಮತಿಯನ್ನು ನಿರ್ಧರಿಸಬಾರದು. ಶಾಲಾ-ಕಾಲೇಜುಗಳಲ್ಲಿ ಹಿಜಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ.

ಆ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಅವಮಾನಿಸುತ್ತಿದೆ ಎಂದು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿ ರಷದ್ ಹುಸೇನ್ ಟ್ವೀಟ್ ಮಾಡಿದ್ದಾರೆ.

ಆಸ್ಟ್ರೇಲಿಯಾದ ಮೆಲ್ಬರ್ನ್ನಲ್ಲಿ ನಡೆದ ʼಕ್ವಾಡ್ʼ ಸದಸ್ಯ ರಾಷ್ಟ್ರಗಳ ಸಭೆಯ ಬೆನ್ನಲ್ಲೇ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ