ಹಿಜಬ್ ಪ್ರತಿಭಟನೆ : ಮೊದಲ ಬಾರಿಗೆ ಆರೋಪಿಗೆ ಮರಣದಂಡನೆ ಶಿಕ್ಷೆ

ಸೋಮವಾರ, 14 ನವೆಂಬರ್ 2022 (12:15 IST)
ಟೆಹ್ರಾನ್ : ಹಿಜಬ್ ವಿರೋಧಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಇರಾನ್ನಲ್ಲಿ ಮೊದಲ ಬಾರಿಗೆ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ದೇಶಲ್ಲಿ ಹಿಜಬ್ ಅನ್ನು ವಿರೋಧಿಸಿ ನಿರಂತರವಾಗಿ ಅಶಾಂತಿ ಮುಂದುವರಿದಿದ್ದು, ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಸಿರುವ ಆರೋಪದಲ್ಲಿ ಕೆಲವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಕ್ಲೆರಿಕಲ್ ಆಡಳಿತವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟಿಸಿರುವವರನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಮೊದಲ ಬಾರಿಗೆ ಮರಣದಂಡನೆ ವಿಧಿಸಿದೆ.

ಪ್ರತಿಭಟನೆಯಲ್ಲಿ ತೊಡಗಿದ ವ್ಯಕ್ತಿಯೊಬ್ಬರು ಕಟ್ಟಡಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ಅವರಿಗೆ ಮರಣದಂಡನೆ ವಿಧಿಸಲಾಗಿದೆ. ಇನ್ನೂ 5 ಜನರಿಗೆ ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ಆರೋಪದ ಮೇಲೆ 5 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ