ಮೊಟ್ಟ ಮೊದಲ ಬಾರಿಗೆ ಪಾಕಿಸ್ತಾನದ ನ್ಯಾಯಾಧೀಶೆಯಾಗಿ ಹಿಂದೂ ಮಹಿಳೆ ನೇಮಕ

ಬುಧವಾರ, 30 ಜನವರಿ 2019 (10:41 IST)
ಪಾಕಿಸ್ತಾನ : ಮೊಟ್ಟ ಮೊದಲ ಬಾರಿಗೆ ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯೊಬ್ಬರು ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.


ನೇತ್ರ ತಜ್ಞರಾಗಿರುವ ಪವನ್ ಕುಮಾರ್ ಬೋಧನ್ ಎಂಬುವವರ ಪುತ್ರಿಯಾಗಿರುವ ಸುಮನ್ ಕುಮಾರಿ ಖಂಬರ್-ಶಹದಾದ್ಕೋಟ್ ಜಿಲ್ಲೆಯ ಮೂಲದವರಾಗಿದ್ದು, ಇದೀಗ ಅದೇ ಜಿಲ್ಲೆಯಲ್ಲಿ ಸಿವಿಲ್ ನ್ಯಾಯಾಧೀಶೆಯಾಗಿ ಸೇವೆ ಸಲ್ಲಿಸಲಿದ್ದಾರೆ.


ಇವರು ಹೈದರಾಬಾದ್ ನಲ್ಲಿ ಎಲ್.ಎಲ್.ಬಿ. ಪದವಿ ಪಡೆದಿದ್ದು, ನಂತರ ಕರಾಚಿ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. ಜಿಲ್ಲೆಯಲ್ಲಿರುವ ಬಡವರಿಗೆ ಉಚಿತ ಕಾನೂನು ನೆರವು ನೀಡುವುದು ಸುಮನ್ ಕುಮಾರಿ ಅವರ ಉದ್ದೇಶವೆಂಬುದು ಅವರ ತಂದೆಯಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ