ಇಮ್ರಾನ್ ಖಾನ್‌ಗೆ 3 ವರ್ಷ ಜೈಲು, 5 ವರ್ಷ ರಾಜಕೀಯದಿಂದ ಬ್ಯಾನ್!

ಬುಧವಾರ, 9 ಆಗಸ್ಟ್ 2023 (12:18 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತೋಷಖಾನಾ ಕೇಸ್ನಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದ್ದು ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
 
ಪಾಕಿಸ್ತಾನದ ರಾಜಕೀಯ ಪಕ್ಷವಾದ PTIನ ಅಧ್ಯಕ್ಷರೂ ಆಗಿದ್ದ ಇಮ್ರಾನ್ ಖಾನ್ರನ್ನ, ಲಾಹೋರ್ನಲ್ಲಿರುವ ಜಮಾನ್ ಪಾರ್ಕ್ ಮನೆಯಲ್ಲಿ ಬಂಧಿಸಲಾಗಿದೆ ಎಂದು ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಟ್ವೀಟ್ ಮೂಲಕ ತಿಳಿಸಿದೆ.

ಲಾಹೋರ್ನಲ್ಲಿ ಬಂಧಿಸಿದ ಬಳಿಕ ರಾಜಧಾನಿ ಇಸ್ಲಾಮಾಬಾದ್ಗೆ ಕರೆತರಲಾಗಿದ್ದು, ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು 5 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಭಾಗವಹಿಸದಂತೆ ನಿರ್ಬಂಧ ಹೇರಿದೆ. ಈ ನಡುವೆ ಪಿಟಿಐ ಪ್ರಧಾನ ಕಾರ್ಯದರ್ಶಿ ಒಮರ್ ಅಯೂಬ್ ಖಾನ್, ಇಮ್ರಾನ್ ಖಾನ್ ಬಂಧನ ವಿರೋಧಿಸಿ ಶಾಂತಿಯುತ ಪ್ರತಿಭೆನಟಗೆ ಕರೆ ನೀಡಿದ್ದಾರೆ.

ಶನಿವಾರ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು ತೋಷಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನ ತಪ್ಪಿತಸ್ಥ ಎಂದು ಘೋಷಿಸಿದೆ. ಇಸ್ಲಾಮಾಬಾದ್ ಮೂಲದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಹೆಚ್ಚುವರಿ ನ್ಯಾಯಾಧೀಶ ಹುಮಾಯೂನ್ ದಿಲಾವರ್ ಅವರು ಖಾನ್ಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸಲು ವಿಫಲರಾದಲ್ಲಿ ಇನ್ನೂ ಹೆಚ್ಚುವರಿ 6 ತಿಂಗಳು ಜೈಲಿನಲ್ಲಿ ಇರಿಸುವುದಾಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ