ಇಸ್ಲಾಮಾಬಾದ್ : ಕೇಂದ್ರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಹಿನ್ನೆಲೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾರತವನ್ನು ಹೊಗಳಿದ್ದಾರೆ.
ರಷ್ಯಾದ ತೈಲವನ್ನು ಭಾರತ ರಿಯಾಯಿತಿ ದರದಲ್ಲಿ ಖರೀದಿಸಿದೆ. ಅಮೆರಿಕದ ಒತ್ತಡದ ನಡುವೆಯೂ ಜನಸಾಮಾನ್ಯರಿಗೆ ಪರಿಹಾರ ನೀಡಲು ಭಾರತ ರಿಯಾಯಿತಿ ದರದಲ್ಲಿ ರಷ್ಯಾದ ತೈಲವನ್ನು ಖರೀದಿಸಿದೆ ಎಂದು ಶ್ಲಾಘಿಸಿದ್ದಾರೆ.
ಭಾರತ ಕ್ವಾಡ್ ರಾಷ್ಟ್ರಗಳಲ್ಲಿ(ಅಮೆರಿಕ, ಆಸ್ಟ್ರೇಲಿಯಾ, ಜಪಾನ್, ಭಾರತ) ಒಂದಾಗಿದ್ದರೂ ಅಮೆರಿಕದ ಒತ್ತಡವನ್ನು ಎದುರಿಸಿ, ಜನಸಾಮಾನ್ಯರಿಗೆ ಪರಿಹಾರ ಒದಗಿಸಲು ರಿಯಾಯಿತಿ ದರದಲ್ಲಿ ರಷ್ಯಾದ ತೈಲವನ್ನು ಖರೀದಿಸಿತು.
ಪಾಕಿಸ್ತಾನದಲ್ಲಿ ನಮ್ಮ ಸರ್ಕಾರವಿದ್ದಾಗ ನಾವು ಕೂಡಾ ಸ್ವತಂತ್ರ್ಯ ವಿದೇಶಾಂಗ ನೀತಿಯ ಸಹಾಯದಿಂದ ಇದೇ ರೀತಿಯಾಗಿ ಕೆಲಸ ಮಾಡುತ್ತಿದ್ದೆವು ಎಂದು ಖಾನ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.