ರಾಜೀನಾಮೆ ನೀಡಲ್ಲ ಎಂದ ಇಮ್ರಾನ್ ಖಾನ್

ಶುಕ್ರವಾರ, 25 ಮಾರ್ಚ್ 2022 (14:48 IST)
ಇಸ್ಲಾಮಾಬಾದ್ : ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪಟ್ಟು ಹಿಡಿದಿದ್ದಾರೆ.

ಪಾಕ್ ಪ್ರಧಾನಿ ಇಮ್ರಾನ್ಖಾನ್ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ಆದರೆ, ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ಕೊಡುವುದಿಲ್ಲ. ಹೋರಾಟವಿಲ್ಲದೆ ನಾನು ಎಂದಿಗೂ ಶರಣಾಗುವುದಿಲ್ಲ. ಕೆಲ ದ್ರೋಹಿಗಳ ಒತ್ತಡವನ್ನು ಸುಮ್ಮನೆ ಏಕೆ ಸಹಿಸಿಕೊಳ್ಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಇಮ್ರಾನ್ಖಾನ್ ವಿರುದ್ಧ ನಿಗದಿಪಡಿಸಿದ್ದ ಅವಿಶ್ವಾಸ ಗೊತ್ತುವಳಿ ಅಧಿವೇಶನವು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಸಂಸದ ಖಯಾಲ್ ಜಮಾನ್ ಅವರ ನಿಧನದಿಂದಾಗಿ ಮಾರ್ಚ್ 28ಕ್ಕೆ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಅಸಾದ್ ಕೈಸರ್ ತಿಳಿಸಿದ್ದಾರೆ.

ಇಮ್ರಾನ್ಖಾನ್ ಅವರು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರವು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಪಾಕಿಸ್ತಾನವು ಅಳಿವಿನ ಅಂಚಿನತ್ತ ಸಾಗುತ್ತಿದೆ ಮತ್ತು ಹಣದುಬ್ಬರ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಆರೋಪಿಸಿ ಮಾರ್ಚ್ 8 ರಂದು ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿ ಸಚಿವಾಲಯದ ಮುಂದೆ ದೂರು ನೀಡಲಾಗಿತ್ತು.

ಇದರಿಂದಾಗಿ ಮಾರ್ಚ್ ೨೫ರಂದು ಇಮ್ರಾನ್ಖಾನ್ ಅವರನ್ನು ಪದಚ್ಯುತಿಗೊಳಿಸಲು ಅವಿಶ್ವಾಸ ಗೊತ್ತುವಳಿ ಮಂಡಿಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಇಂದು ಖಯಾಲ್ ಜಮಾನ್ ಅವರ ನಿಧನದ ಕಾರಣದಿಂದಾಗಿ ಸಭೆಯನ್ನು ಮಾರ್ಚ್ ೨೮ಕ್ಕೆ ಮುಂದೂಡಲಾಗಿದೆ. ಅಂದು ಸಂಜೆ ೪ ಗಂಟೆಗೆ ಅಧಿವೇಶನ ನಡೆಯುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ