ಉಗ್ರ ಮಸೂದ್ ಅಜರ್ ಬಗ್ಗೆ ಭಾರತ, ಪಾಕ್ ನೇರ ಚರ್ಚೆ ನಡೆಸಲಿ: ಚೀನಾ

ಬುಧವಾರ, 27 ಏಪ್ರಿಲ್ 2016 (12:51 IST)
ವಿಶ್ವಸಂಸ್ಥೆಯಲ್ಲಿ ಜೈಷ್-ಎ-ಮೊಹಮ್ಮದ ಉಗ್ರಗಾಮಿ ಸಂಘಟನೆಗೆ ನಿಷೇಧ ಹೇರುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದ ಚೀನಾ, ಇದೀಗ ಭಾರತ ಮತ್ತು ಪಾಕಿಸ್ತಾನ ನೇರವಾಗಿ ಮಸೂದ್ ಅಜರ್ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಿ ಎಂದು ಸಲಹೆ ನೀಡಿದೆ.
 
 ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ವಿಷಯ ಕುರಿತಂತೆ ಭಾರತ ಮತ್ತು ಪಾಕಿಸ್ತಾನ ಗಂಭೀರವಾಗಿ ಚರ್ಚೆ ನಡೆಸುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್‌ಯಿಂಗ್ ತಿಳಿಸಿದ್ದಾರೆ.
 
ವಿಶ್ವಸಂಸ್ಥೆಯಲ್ಲಿ ಜೈಷ್-ಎ-ಮೊಹಮ್ಮದ ಉಗ್ರಗಾಮಿ ಸಂಘಟನೆಗೆ ನಿಷೇಧ ಹೇರುವ ಕ್ರಮಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿದ್ದರಿಂದ ನವದೆಹಲಿಯಲ್ಲಿರುವ ಚೀನಾ ರಾಯಭಾರಿ ಕಚೇರಿಯ ಮುಂದೆ ಭಾರಿ ಪ್ರತಿಭಟನೆ ನಡೆಸಲಾಗಿತ್ತು. 
 
ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳು ದ್ವಿಪಕ್ಷಿಯ ಮಾತುಕತೆ ನಡೆಸುತ್ತಿರುವಾಗಲೇ ಚೀನಾ ಸಲಹೆ ನೀಡಿರುವುದು ಪಾಕಿಸ್ತಾನಕ್ಕೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ