ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಭಾರತೀಯ ಮೂಲದ ಮಹಿಳೆಯನ್ನು ಅಪಹರಿಸಿದ್ದು, ಆಕೆಯ ಬಿಡುಗಡೆಗಾಗಿ ಸರಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕೋಲ್ಕತಾ ಮೂಲದ ಮಹಿಳೆ ಕಾಬೂಲ್‌ನ ತೈಮಣಿ ಪ್ರದೇಶದಲ್ಲಿ ವಾಸಿಸುತ್ತಿದ್ದು, ಅವರನ್ನು ತಾಲಿಬಾನಿಗಳು ಅಪಹರಿಸಿದ್ದು, ಅವರ ಬಿಡುಗಡೆಗಾಗಿ ಅಫ್ಘನ್ ಸರಕಾರ ತಾಲಿಬಾನಿ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಘಾನಿಸ್ತಾನ್‌ದಲ್ಲಿರುವ ಆಘಾ ಖಾನ್ ಫೌಂಡೇಶನ್‌ಗಾಗಿ ಭಾರತೀಯ ಮಹಿಳೆ ಕಾರ್ಯನಿರ್ವಹಿಸುತ್ತಿದ್ದು, ನಿನ್ನೆ ಕರ್ತವ್ಯದಲ್ಲಿರುವಾಗಲೇ ಆಕೆಯನ್ನು ಅಪಹರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು ಅಫ್ಘಾನಿಸ್ತಾನದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಹಿಳೆಯ ಬಿಡುಗಡೆಗಾಗಿ ಮಾತುಕತೆ ನಡೆಯುತ್ತಿದೆ ಎಂದು ರಾಯಭಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ