ರಾಜೀನಾಮೆ ಸಲ್ಲಿಸಿದ ಇನ್ಫೋಸಿಸ್ ರಿಷಿ ಸುನಾಕ್ !
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ವಿರುದ್ಧ ಭಿನ್ನಾಭಿಪ್ರಾಯದಿಂದ ಸಜ್ಜಿದ್ ಜಾವೇದ್ ರಾಜೀನಾಮೆ ನೀಡಿದ ಬೆನ್ನಲ್ಲೇ ರಿಷಿ ಸುನಾಕ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜೀನಾಮೆ ಪತ್ರವನ್ನು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೆಲದಿನಗಳ ಹಿಂದೆ ಅಮಾನತುಗೊಂಡಿರುವ ಸಂಸದ ಕ್ರಿಸ್ ಪಿಂಚರ್ ವಿರುದ್ಧ ಡೌನಿಂಗ್ ಸ್ಟ್ರೀಟ್ನ ಆರೋಪಗಳ ನಿರ್ವಹಣೆ ಬಗ್ಗೆ ಮಾಜಿ ನಾಗರಿಕ ಸೇವಕರು ದನಿಎತ್ತಿದ ಬಳಿಕ ಪ್ರಧಾನಿ ಹಾಗೂ ಸಚಿವರ ನಡುವೆ ರಾಜಕೀಯ ಭಿನ್ನಾಭಿಪ್ರಾಯ ಆರಂಭಕೊಂಡಿತ್ತು.
ಇದೀಗ ಹಣಕಾಸು ಸಚಿವರು ಹಾಗೂ ಆರೋಗ್ಯ ಕಾರ್ಯದರ್ಶಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಸರ್ಕಾರದಿಂದ ಹೊರ ನಡೆದಿದ್ದಾರೆ.