ಕುರಾನ್‌ ಗ್ರಂಥಕ್ಕೆ ಅವಮಾನ: ಪೊಲೀಸ್ ವಶದಲ್ಲಿದ್ದ ವ್ಯಕ್ತಿಯನ್ನು ಹೊರಗೆಳೆದು ಭೀಕರ ಹತ್ಯೆ

Sampriya

ಶುಕ್ರವಾರ, 21 ಜೂನ್ 2024 (18:47 IST)
Photo Courtesy X
ಪಾಕಿಸ್ತಾನ: ಇಸ್ಲಾಂ ಧರ್ಮದ ಪವಿತ್ರ ಕುರಾನ್‌ ಗ್ರಂಥಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಉದ್ರಿಕ್ತರ ಗುಂಪು ವ್ಯಕ್ತಿಯನ್ನು ಅತ್ಯಂತ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿ ಒಬ್ಬ ವ್ಯಕ್ತಿಯನ್ನು ಕೊಂದ ನೂರಾರು ಜನರ ವಿರುದ್ಧ ವಾಯುವ್ಯ ಪಾಕಿಸ್ತಾನದ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.

ಶಂಕಿತ ವ್ಯಕ್ತಿಯನ್ನು ಮೊಹಮ್ಮದ್ ಇಸ್ಮಾಯಿಲ್ ಎಂದು ಗುರುತಿಸಲಾಗಿದ್ದು, ಅವರು ಪೂರ್ವ ಪಂಜಾಬ್ ಪ್ರಾಂತ್ಯದ ಪ್ರವಾಸಿಯಾಗಿದ್ದು, ಪಟ್ಟಣದ ಹೋಟೆಲ್‌ನಲ್ಲಿ ತಂಗಿದ್ದರು. ಈ ವೇಳೆ ಕುರಾನ್ ಪುಸ್ತಕವನ್ನು ಸುಟ್ಟು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ.

ವಿಚಾರ ತಿಳಿದು ಪೊಲೀಸರು ಮೊಹಮ್ಮದ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಠಾಣೆಗೆ ಕರೆತಂದಿದ್ದಾರೆ. ಈ ವೇಳೆ ಉದ್ರಿಕ್ತರ ಗುಂಪು ಠಾಣೆಗೆ ನುಗ್ಗಿ, ಮೊಹಮ್ಮದ್‌ನನ್ನು ಎಳೆದೆಕೊಂಡು ಹೋಗಿ ಬೆಂಕಿ ಹಚ್ಚಿ ಭೀಕರವಾಗಿ ಹತ್ಯೆ ನಡೆಸಿದ್ದಾರೆ.

ಸದ್ಯ ಈ ಭೀಕರ ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಶ್ವವೇ ಬೆಚ್ಚಿಬಿದ್ದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ