ಕುಲಭೂಷಣ್ ಜಾಧವ್ ಮರಣ ದಂಡನೆ ಶಿಕ್ಷೆಗೆ ತಡೆ ನೀಡಿದ ಅಂತರರಾಷ್ಟ್ರೀಯ ಕೋರ್ಟ್

ಗುರುವಾರ, 18 ಜುಲೈ 2019 (06:19 IST)
ಹೇಗ್ : ಭಾರತದ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಆತನ  ಮರಣ  ದಂಡನೆ ಶಿಕ್ಷೆಗೆ ತಡೆ ನೀಡಿ ಅಂತರರಾಷ್ಟ್ರೀಯ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಈ ಮೂಲಕ ಭಾರತಕ್ಕೆ ರಾಜತಾಂತ್ರಿಕ ಗೆಲುವು ಸಿಕ್ಕಿದೆ.
ಭಾರತದ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಸೇನಾ ನ್ಯಾಯಾಲಯದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿದ್ದರು. ಈ ತೀರ್ಪನ್ನು ಪ್ರಶ್ನಿಸಿ  ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಮೊರೆ ಹೋಗಿತ್ತು.


16 ನ್ಯಾಯಮೂರ್ತಿಗಳನ್ನು ಒಳಗೊಂಡ ಅಂತರರಾಷ್ಟ್ರೀಯ ನ್ಯಾಯಾಲಯದ ಪೀಠ ಈ ಪ್ರಕರಣದ ವಿಚಾರಣೆ ನಡೆಸಿ ಜಾಧವ್ ಅವರಿಗೆ ಮರಣ ದಂಡನೆಗೆ ತಡೆ ನೀಡಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಿಕ್ಷೆ ಮರು ಪರಿಶೀಲನೆಗೆ ಆದೇಶಿಸಿದೆ. ಇದರಿಂದ ಪಾಕ್ ವಿರುದ್ಧ ಭಾರತಕ್ಕೆ ಮಹತ್ವದ ಗೆಲುವು ಸಿಕ್ಕಂತಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ