ವ್ಲಾಡಿಮಿರ್ ಪುಟಿನ್ ಆರೋಗ್ಯ ಮತ್ತಷ್ಟು ಕ್ಷೀಣ?

ಶುಕ್ರವಾರ, 4 ನವೆಂಬರ್ 2022 (12:13 IST)
ಮಾಸ್ಕೋ : ಉಕ್ರೇನ್ ವಿರುದ್ಧ ಸಮರ ಸಾರಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸುತ್ತಿದೆ.

ದೇಹದ ಇತರ ಭಾಗಗಳು ಚುಚ್ಚುಮದ್ದು ತೆಗೆದುಕೊಳ್ಳಲು ಸ್ಪಂದಿಸದಂತಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.

ಪುಟಿನ್ ದೇಹದ ಮೇಲೆ ವಿಚಿತ್ರ ಗುರುತುಗಳು ಪತ್ತೆಯಾಗಿದ್ದು, ಈ ಕುರಿತ ಫೋಟೋಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಇದು ಆರೋಗ್ಯ ಕ್ಷೀಣಿಸಿರುವ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ನಿವೃತ್ತ ಬ್ರಿಟಿಷ್ ಸೇನಾಧಿಕಾರಿ ಮತ್ತು ಹೌಸ್ ಆಫ್ ಲಾರ್ಡ್ಸ್ ಸದಸ್ಯ ರಿಚರ್ಡ್ ಡಾನಾಟ್, ಪುಟಿನ್ ಅವರ ಚಿತ್ರಗಳು ಅವರು ಎಷ್ಟು ಆರೋಗ್ಯವಾಗಿದ್ದಾರೆ ಎಂಬುದನ್ನೂ ಸೂಚಿಸುತ್ತದೆ.

ಅವರ ಕೈಗಳ ಮೇಲ್ಬಾಗದಲ್ಲಿ ಕಪ್ಪು ಬಣ್ಣದ ಗುರುತುಗಳು ಕಾಣುತ್ತಿವೆ. ಅಲ್ಲದೇ ಪುಟಿನ್ ದೇಹದ ಇತರ ಭಾಗಗಳು ಇಂಜೆಕ್ಷನ್ ತೆಗೆದುಕೊಳ್ಳಲು ಸ್ಪಂದಿಸುತ್ತಿಲ್ಲ. ಪುಟಿನ್ ಆರೋಗ್ಯವಾಗಿದ್ದಾರೆ, ಆದರೂ ಅವರ ಬಗ್ಗೆ ಎಚ್ಚರ ವಹಿಸಬೇಕಾದ ಅಗತ್ಯವಿದೆ ಎಂದು ರಿಚರ್ಡ್ ಡಾನಾಟ್ ಅವರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ