ಇನ್ನೂ ನಿಲ್ಲದ ಉಗ್ರರ ಅಟ್ಟಹಾಸ, ವಾರದಲ್ಲಿ 232 ಹತ್ಯೆ

ಶನಿವಾರ, 29 ಅಕ್ಟೋಬರ್ 2016 (11:16 IST)

ಇರಾಕ್: ಇಸ್ಲಾಮಿಕ್ ಸ್ಟೇಟ್ ಉಗ್ರರು ಇರಾಕ್ ನ ಮಸುಲ್ ನಗರದಲ್ಲಿ ದಾಳಿ ನಡೆಸುತ್ತಿದ್ದು, ಕಳೆದ ಒಂದು ವಾರದಲ್ಲಿ ಕನಿಷ್ಠ 232 ಜನರನ್ನು ದಾರುಣವಾಗಿ ಹತ್ಯೆ ಮಾಡಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.
 


 

ಒಂದು ತಿಂಗಳಿನಿಂದ ಇರಾಕ್ ನಲ್ಲಿ ಇಸ್ಲಾಮಿಕ್ ಉಗ್ರರು ವಿದ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಅಮಾಯಕ ಮುಗ್ಧ ಜನರನ್ನು ಹತ್ಯೆ ಗೈದು ಅಟ್ಟಹಾಸ ಮೆರೆಯುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ aಅವರು 232 ಸಾರ್ವಜನಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇದರಲ್ಲಿ 190 ಇರಾಕ್ ಭದ್ರತಾ ಪಡೆಯ ಮಾಜಿ ಅಧಿಕಾರಿಗಳು ಸೇರಿದ್ದಾರೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ವಕ್ತಾರ ರವೀನ್ ಶಾಮ್ದಸಾನಿ ಜಿನಿವಾದಲ್ಲಿ ಹೇಳಿದ್ದಾರೆ.

 

ಮಸೂಲ್ ನಗರವನ್ನು ವಶಪಡಿಸಿಕೊಳ್ಳಲು ಉಗ್ರರು ಸಾಕಷ್ಟು ಜನರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದರು. ಅವರನ್ನೆಲ್ಲ ಹತ್ಯೆ ಮಾಡಿ ತಮ್ಮ ಕ್ರೌರ್ಯ ಪ್ರದರ್ಶಿಸುತ್ತಿದ್ದಾರೆ. ಮಸೂಲ್ ನಗರವನ್ನು ವಶಪಡಿಸಿಕೊಳ್ಳಲು ಅಮೆರಿಕ ಸೇನೆ ಹಾಗೂ ಇರಾಕ್ ಸೇನೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನು ತಪ್ಪಿಸಿಕೊಳ್ಳಲೆಂದು ಸ್ಥಳೀಯರನ್ನು ರಕ್ಷಾ ಕವಚದಂತೆ ಇಸ್ಲಾಮಿಕ್ ಉಗ್ರರು ಬಳಸಿಕೊಂಡು ಹತ್ಯೆ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ