ವಿದೇಶಾಂಗ ಸಚಿವ ಖ್ವಾಜಾ ಆಸಿಫ್ರ ರನ್ನು ಶಾಶ್ವತವಾಗಿ ಅನರ್ಹಗೊಳಿಸಿದ ಇಸ್ಲಾಮಾಬಾದ್ ಹೈಕೋರ್ಟ್
ಶುಕ್ರವಾರ, 27 ಏಪ್ರಿಲ್ 2018 (16:42 IST)
ಇಸ್ಲಾಮಾಬಾದ್ : 2013ರ ಸಾರ್ವತ್ರಿಕ ಚುನಾವಣೆಯ ವೇಳೆ, ತಮ್ಮ ಆದಾಯದ ವಿವರ ಮುಚ್ಚಿಟ್ಟ ಹಿನ್ನಲೆಯಲ್ಲಿ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ರ ಅವರನ್ನು ಸಂಸದ ಸ್ಥಾನದಿಂದ ಇಸ್ಲಾಮಾಬಾದ್ ಹೈಕೋರ್ಟ್ ಶಾಶ್ವತವಾಗಿ ಅನರ್ಹಗೊಳಿಸಿದೆ.
ಸಚಿವ ಖ್ವಾಜಾ ಆಸಿಫ್ರ ಅವರು ತಮ್ಮ ಆದಾಯದ ವಿವರ ಮುಚ್ಚಿಟ್ಟ ಬಗ್ಗೆ ಪ್ರತಿಸ್ಪರ್ಧಿ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ನಾಯಕ ಉಸ್ಮಾನ್ ದರ್ ದೂರು ಸಲ್ಲಿಸಿದ್ದರು. ಇತ್ತೀಚೆಗಷ್ಟೇ ಮಾಜಿ ಪ್ರಧಾನ ಮಂತ್ರಿ ನವಾಜ್ ಷರೀಫ್ರನ್ನು ಶಾಶ್ವತವಾಗಿ ಅನರ್ಹಗೊಳಿ ಸಲಾಗಿದ್ದು, ಇದೀಗ ಮಹಾ ಚುನಾವಣೆಗೆ ಸಜ್ಜಾಗುತ್ತಿರುವಈ ಸಮಯದಲ್ಲಿ ಹೈಕೋರ್ಟ್ ನೀಡಿರುವ ಈ ತೀರ್ಪಿನಿಂದ ಆಡಳಿತಾರೂಢ ಪಿಎಂಎಲ್-ಎನ್ ಪಕ್ಷಕ್ಕೆ ಮತ್ತೊಮ್ಮೆ ಪೆಟ್ಟು ಬಿದ್ದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ