ಇಸ್ರೇಲ್ ಸೇನಾ ಕಾರ್ಯಾಚರಣೆ: ಲೆಬನಾನ್ ತೊರೆಯಲು ತನ್ನ ಪ್ರಜೆಗಳಿಗೆ ಕರೆ ನೀಡಿದ ಆಸ್ಟ್ರೇಲಿಯಾ

Sampriya

ಗುರುವಾರ, 26 ಸೆಪ್ಟಂಬರ್ 2024 (14:26 IST)
Photo Courtesy X
ಸಿಡ್ನಿ: ಮೂರು ದಿನಗಳ ಹಿಂದೆ ಲೆಬನಾನ್‌ ಮೇಲೆ ಇಸ್ರೇಲ್‌ ನಡೆಸಿದ ಸೇನಾ ಕಾರ್ಯಾಚರಣೆಯಿಂದ ಸುಮಾರು 600 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಅದರ ಬೆನ್ನಲ್ಲೇ ಬೈರೂತ್‌ ವಿಮಾನ ನಿಲ್ದಾಣ ಸ್ಥಗಿತಗೊಳ್ಳುವ ಸಾಧ್ಯತೆ ಇರುವುದರಿಂದ, ತಕ್ಷಣವೇ ಲೆಬನಾನ್‌ ತೊರೆಯುವಂತೆ ತನ್ನ ಪ್ರಜೆಗಳಿಗೆ ಆಸ್ಟ್ರೇಲಿಯಾ ಸೂಚನೆ ನೀಡಿದೆ.

ಗಾಜಾದಲ್ಲಿ ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಯುದ್ಧ ಆರಂಭವಾದಾಗಿಂದ ಲೆಬನಾನಿನ ಹಿಜ್ಬುಲ್ಲಾ ಸಂಘಟನೆ ಮತ್ತು ಇಸ್ರೇಲ್‌ ಪಡೆ ನಡುವೆ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಡಿಯಾಚೆಗಿನ ಸಂಘರ್ಷ ತೀವ್ರಗೊಂಡಿದೆ.

ಆಸ್ಟ್ರೇಲಿಯಾದ ವಿದೇಶಾಂಗ ಇಲಾಖೆಯ ಮಾಹಿತಿ ಪ್ರಕಾರ, ಅಂದಾಜು 15,000 ಆಸ್ಟ್ರೇಲಿಯನ್ನರು ಲೆಬನಾನ್‌ನಲ್ಲಿದ್ದಾರೆ.

ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಪಾಲ್ಗೊಂಡಿರುವ ಆಸ್ಟ್ರೇಲಿಯಾ ವಿದೇಶಾಂಗ ಸಚಿವೆ ಪೆನ್ನಿ ವಾಂಗ್‌ ಅವರು, ಇಸ್ರೇಲ್‌, ಲೆಬನಾನ್‌ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಬೈರೂತ್‌ ವಿಮಾನ ನಿಲ್ದಾಣ ದೀರ್ಘಾವಧಿವರೆಗೆ ಮುಚ್ಚುವ ಸಾಧ್ಯತೆ ಇದೆ. ಆಸ್ಟ್ರೇಲಿಯನ್ನರು ಕೂಡಲೇ ಹೊರಡಬೇಕು ಎಂದು ಒತ್ತಾಯಿಸಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು, ಪ್ರಜೆಗಳನ್ನು ಜಲಮಾರ್ಗವಾಗಿಯಾದರೂ ವಾಪಸ್‌ ಕರೆತರುವ ನಿಟ್ಟಿನಲ್ಲೂ ಸರ್ಕಾರ ಯೋಜಿಸಿದೆ ಎಂದಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ