ಇತ್ತೀಚೆಗೆ ಗೋವಾ ಸಿನಿಮೋತ್ಸವದಲ್ಲಿ ಜ್ಯೂರಿಯಾಗಿದ್ದ ನಡಾವ್ ಲಾಪಿಡ್ `ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ನಡಾವ್ ವಿರುದ್ಧ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ಈಗ ನಡಾವ್ ಕ್ಷಮೆ ಕೇಳಿದ್ದಾರೆ. `ಕಾಶ್ಮೀರಿ ಫೈಲ್ಸ್ ಸಿನಿಮಾ ಅಶ್ಲೀಲ ಪ್ರಚಾರದ ಸಿನಿಮಾ ಎಂದು ಹೇಳಿಕೆ ನೀಡುವ ಮೂಲಕ ಅನೇಕರ ಕೆಂಗಣ್ಣಿಗೆ ನಡಾವ್ ಲಾಪಿಡ್ ಗುರಿಯಾಗಿದ್ದರು.
ಬಳಿಕ ಈ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ನಡಾವ್ ಹೇಳಿಕೆಗೆ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದರು. ಈಗ ಕಾಶ್ಮೀರಿ ಪಂಡಿತ್ ಸಮುದಾಯವನ್ನು ಅವಮಾನಿದೋದು ನನ್ನ ಉದ್ದೇಶವಲ್ಲ ಕ್ಷಮಿಸಿ ಎಂದು ನಡಾವ್ ಪ್ರತಿಕ್ರಿಯೆ ನೀಡಿದ್ದಾರೆ.