Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Krishnaveni K

ಸೋಮವಾರ, 19 ಮೇ 2025 (10:18 IST)
ನ್ಯೂಯಾರ್ಕ್: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಅವರ ಕಚೇರಿಯಿಂದಲೇ ಅಧಿಕೃತ ಮಾಹಿತಿ ನೀಡಲಾಗಿದೆ.
 

ಗಂಭೀರ ಸ್ವರೂಪದ ಪ್ರಾಸ್ಟೇಟ್ ಕ್ಯಾನ್ಸರ್ ಪತ್ತೆಯಾಗಿದೆ ಎಂದು ಬೈಡನ್ ಅವರ ಕಚೇರಿ ಮೂಲಗಳು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೇ ಸಾಕಷ್ಟು ಜನ ಅವರ ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದು ಶೀಘ್ರವಾಗಿ ಚೇತರಿಸಿಕೊಳ್ಳಿ ಎಂದು ಹಾರೈಸಿದ್ದಾರೆ.

ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಿಂತ ಮೊದಲು ಅಮೆರಿಕಾ ಅಧ್ಯಕ್ಷರಾಗಿದ್ದವರು ಜೋ ಬೈಡನ್. ಬೈಡನ್ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೇ ಟ್ರಂಪ್ ಕೂಡಾ ಚೇತರಿಕೆಗೆ ಹಾರೈಸಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

82 ವರ್ಷದ ಜೋ ಬೈಡನ್ ಗೆ ಮೂತ್ರ ವಿಸರ್ಜನೆಯಲ್ಲಿ ಸಮಸ್ಯೆ ಎದುರಾಗಿತ್ತು. ಪರೀಕ್ಷಿಸಿದಾಗ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಪ್ರಾಸ್ಟೇಟ್ ಕ್ಯಾನ್ಸರ್ ಬೇಗನೇ ಹರಡುತ್ತದೆ. ಇದು ಮೂಳೆಗಳಿಗೂ ವ್ಯಾಪಿಸುತ್ತದೆ. ಇದೀಗ ಬೈಡನ್ ಗೂ ಮೂಳೆಗಳಿಗೂ ಕ್ಯಾನ್ಸರ್ ವ್ಯಾಪಿಸಿದ್ದು ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ