Booker Award: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

Krishnaveni K

ಬುಧವಾರ, 21 ಮೇ 2025 (09:28 IST)
Photo Credit: X
ಬೆಂಗಳೂರು: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಒಲಿದಿದೆ. ಬಾನು ಅವರ ಹಸೀನಾ ಮತ್ತು ಇತರ ಕತೆಗಳು ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್ ಗೆ ಪ್ರಶಸ್ತಿ ಸಿಕ್ಕಿದೆ.

ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ದೊರಕಿರುವುದು ವಿಶೇಷವಾಗಿದೆ. ಈ ಹಿಂದೆ ಇದೇ ಕೃತಿಗೆ ಪೆನ್ ಟ್ರಾನ್ಸಲೇಟ್ ಪ್ರಶಸ್ತಿ ಲಭಿಸಿತ್ತು. ಇದೀಗ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ 50 ಸಾವಿರ ಪೌಂಡ್ ನಗದು ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸುಮಾರು 57.28 ಲಕ್ಷ ರೂ.ಗಳನ್ನು ಒಳಗೊಂಡಿದೆ. ಬಾನು ಮುಷ್ತಾಕ್ ಅವರ 1990 ರಿಂದ 2023 ರ ಅವಧಿಯಲ್ಲಿ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಸಂಕಲನವನ್ನು ದೀಪಾ ಭಸ್ತಿ ಇಂಗ್ಲಿಷ್ ಗೆ ಅನುವಾದಿಸಿದ್ದರು.

ಈ ಕೃತಿಯಲ್ಲಿ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಜೀವನದ ಬಗ್ಗೆ ವಿಶೇಷವಾಗಿ ಕತೆ ಹೆಣೆಯಲಾಗಿದೆ. ಇಂದು ಲಂಡನ್ ನ ಟೇಟ್ ಮಾಡರ್ನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ