ಪಾಕಿಸ್ತಾನ ಸಂಸತ್ತಿನ ಜಂಟಿ ಅಧಿವೇಶನದಲ್ಲಿ, ಭಾರತದೊಂದಿಗಿನ ಉದ್ರಿಕ್ತತೆಯ ಬಗ್ಗೆ ನಡೆದ ಚರ್ಚೆಯ ಸಂದರ್ಭದಲ್ಲಿ ಕಾಶ್ಮಿರ ಬಾರತದ ಅವಿಭಾಜ್ಯ ಅಂಗವಲ್ಲ ಎನ್ನುವ ನಿರ್ಣಯ ಕೈಗೊಂಡಿತು. ಕಾಶ್ಮಿರದಲ್ಲಿ ನಡೆಯುತ್ತಿರುವ ಮಾನಹ ಹಕ್ಕು ಉಲ್ಲಂಘನೆ ಕುರಿತಂತೆ ಅಂತಾರಾಷ್ಟ್ರೀಯ ಸಮುದಾಯ ಸ್ವತಂತ್ರ ತನಿಖಾ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿತು.
ಪ್ರಧಾನಮಂತ್ರಿ ನವಾಜ್ ಷರೀಫ್ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ಸಂಸತ್ತಿನಲ್ಲಿ ನಿರ್ಣಯ ಮಂಡಿಸಿ, ಕಾಶ್ಮಿರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಕ್ರೂರ ಕೃತ್ಯಗಳನ್ನು ನಿಲ್ಲಿಸಲು ವಿಶ್ವ ಸಮುದಾಯ ತನ್ನ ಪಾತ್ರವನ್ನು ನಿಭಾಯಿಸಬೇಕು ಎಂದು ಒತ್ತಾಯಿಸಿದರು.