ಭೂಕುಸಿತ : ಸಂಕಷ್ಟಕ್ಕೆ ಸಿಲುಕಿದ 300 ಮಂದಿ ಪ್ರಯಾಣಿಕರು

ಗುರುವಾರ, 1 ಜೂನ್ 2023 (12:02 IST)
ಡೆಹ್ರಾಡೂನ್ : ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.
 
ಲಖನ್ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು ಬಿದ್ದಿದ್ದು, 100 ಮೀಟರ್ ರಸ್ತೆ ಕೊಚ್ಚಿ ಹೋಗಿದೆ. ಭೂಕುಸಿತದ ಪರಿಣಾಮ ಧಾರ್ಚುಲ ಮತ್ತು ಗುಂಜಿಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. 

ಪಿಥೋರಗಢದ ಹೊರವಲಯದಲ್ಲಿ, ಧಾರ್ಚುಲಾ ಮೇಲೆ 45 ಕಿ.ಮೀ ದೂರದಲ್ಲಿರುವ ಲಿಪುಲೇಖ್-ತವಾಘಾಟ್ ಮೋಟಾರು ರಸ್ತೆ, ಲಖನ್ಪುರ ಬಳಿ ಭೂಕುಸಿತದಿಂದಾಗಿ 100 ಮೀಟರ್ ರಸ್ತೆ ಕೊಚ್ಚಿಹೋಗಿದೆ. ಇದರಿಂದಾಗಿ ಸುಮಾರು 300 ಜನ ಪ್ರಯಾಣಿಕರು ಧಾರ್ಚುಲಾ ಮತ್ತು ಗುಂಜಿಯಲ್ಲಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲದೇ ಇನ್ನೆರಡು ದಿನಗಳಲ್ಲಿ ರಸ್ತೆ ಸಂಚಾರ ಮತ್ತೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. 

ರಾಜ್ಯದ ಅಲ್ಮೋರಾ, ಬಾಗೇಶ್ವರ್, ಚಮೋಲಿ, ಚಂಪಾವತ್, ಡೆಹ್ರಾಡೂನ್, ಗರ್ವಾಲ್, ಹರ್ದ್ವಾರ್, ನೈನಿತಾಲ್, ಪಿಥೋರಗಢ, ರುದ್ರಪ್ರಯಾಗ, ತೆಹ್ರಿ ಗರ್ವಾಲ್, ಉಧಮ್ ಸಿಂಗ್ ನಗರ ಮತ್ತು ಉತ್ತರಕಾಶಿ ಜಿಲ್ಲೆಗಳಲ್ಲಿ ಧೂಳಿನ ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ