ಬೀಜಿಂಗ್ : ಚೀನಾದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಉಲ್ಬಣಿಸುತ್ತಿದ್ದು, ಹಲವೆಡೆ ʼಜೀರೋ ಕೋವಿಡ್ ನಿಯಮʼ ಜಾರಿಗೊಳಿಸಿ ನಿರ್ಬಂಧ ವಿಧಿಸಲಾಗಿದೆ.
ಅಲ್ಲಿನ ಸರ್ಕಾರದ ವಿರುದ್ಧ ಜನ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಮಹಡಿ ಕಟ್ಟಡಕ್ಕೆ ಬೆಂಕಿ ಬಿದ್ದು 10 ಮಂದಿ ಸಾವಿಗೀಡಾದ ಘಟನೆಗೆ ಚೀನಾದಲ್ಲಿ ಜನಾಕ್ರೋಶ ವ್ಯಕ್ತವಾಗಿದೆ.
ದೇಶದಲ್ಲಿ ಕೋವಿಡ್ ಹೆಚ್ಚಳದಿಂದಾಗಿ ಆರ್ಥಿಕ ಕೇಂದ್ರ ಶಾಂಘೈ ಸೇರಿದಂತೆ ಅನೇಕ ನಗರಗಳಲ್ಲಿ ಲಾಕ್ಡೌನ್ ಘೋಷಿಸಲಾಗಿದೆ. ಇದೇ ವೇಳೆ ಕ್ಸಿನ್ಜಿಯಾಂಗ್ ಪ್ರದೇಶದ ರಾಜಧಾನಿ ಉರುಮ್ಕಿಯಲ್ಲಿನ ಬಹುಮಹಡಿ ಕಟ್ಟಡಕ್ಕೆ ಬೆಂಕಿ ಬಿದ್ದು 10 ಜನ ಮೃತಪಟ್ಟಿದ್ದರು.
ಕಟ್ಟಡವು ಭಾಗಶಃ ಲಾಕ್ಡೌನ್ ಆಗಿರುವುದರಿಂದ ನಿವಾಸಿಗಳು ಸಮಯಕ್ಕೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಟೀಕೆ ವ್ಯಕ್ತವಾಗಿದೆ.