`ಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆ ಮೇಲೆ ಭಾರೀ ಪ್ರಭಾವ ಬೀರಿದೆ : ಪುಟಿನ್

ಶುಕ್ರವಾರ, 30 ಜೂನ್ 2023 (11:23 IST)
ಮಾಸ್ಕೋ : ಪ್ರಧಾನಿ ನರೇಂದ್ರ ಮೋದಿಯವರ `ಮೇಕ್ ಇನ್ ಇಂಡಿಯಾ’ ಪರಿಕಲ್ಪನೆ ಭಾರತದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು, 2014ರಲ್ಲಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಬಿತ್ತಿದ್ದರು. ಇದು ಭಾರತದ ಆರ್ಥಿಕತೆಯ ಮೇಲೆ ಯಶಸ್ವಿ ಪರಿಣಾಮವನ್ನು ಬೀರಿದೆ. ಭಾರತದ ಉತ್ತಮ ನಾಯಕ ಮತ್ತು ರಷ್ಯಾದ ಉತ್ತಮ ಸ್ನೇಹಿತ ನರೇಂದ್ರ ಮೋದಿಯವರಿಂದ ಇದು ಸಾಧ್ಯವಾಗಿದೆ ಎಂದು ಅವರು ಹೊಗಳಿದ್ದಾರೆ. ರಷ್ಯಾದಲ್ಲಿ ದೇಶೀಯ ಉತ್ಪನ್ನಗಳನ್ನು ಉತ್ತೇಜಿಸುವ ಸಲುವಾಗಿ ಭಾರತದ ಈ ವಿಚಾರವನ್ನು ಅವರು ಚರ್ಚಿಸಿದ್ದಾರೆ.

ನವದೆಹಲಿಯಲ್ಲಿ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಇತ್ತೀಚೆಗೆ ಮಾತನಾಡಿ, ರಷ್ಯಾ ಮತ್ತು ಭಾರತದ ಪಾಲುದಾರಿಕೆ ವಿಶ್ವಕ್ಕೆ ಬಲವನ್ನು ತೋರಿಸಿದೆ.          

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ