ಜಮ್ಮು ಕಾಶ್ಮೀರದಲ್ಲಿ ಭಾರೀ ಸ್ಫೋಟ!

ಶುಕ್ರವಾರ, 31 ಮಾರ್ಚ್ 2023 (11:20 IST)
ಕಥುವಾ : ಜಮ್ಮು ಮತ್ತು ಕಾಶ್ಮೀರದ ಹೀರಾನಗರದಲ್ಲಿರುವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಭಾರೀ ಸ್ಫೋಟ ಸಂಭವಿಸಿದ್ದು, ಪೊಲೀಸರು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.
 
ಕಥುವಾ ಜಿಲ್ಲೆಯ ಹೀರಾನಗರದಲ್ಲಿರುವ ಅಂತರಾಷ್ಟ್ರೀಯ ಗಡಿಯಲ್ಲಿ ಸಂಜೆಯ ವೇಳೆಗೆ ಬಿಪಿಪಿ ಸಾನ್ಯಾಲ್ ಬಳಿ ಸ್ಫೋಟದ ರೀತಿಯ ಭಯಾನಕ ಶಬ್ದ ಕೇಳಿಸಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಮ್ಮು ಮುಖೇಶ್ ಸಿಂಗ್ ಹೇಳಿಕೆ ನೀಡಿದ್ದಾರೆ.  ಸ್ಫೋಟದ ಬಗ್ಗೆ ಮಾಹಿತಿ ಪಡೆದ ನಂತರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಥುವಾ ಶಿವದೀಪ್ ಸಿಂಗ್ ನೇತೃತ್ವದ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಪ್ರಾರಂಭಿಸಿದೆ. 

ಈ ಸ್ಫೋಟದಿಂದ ಯಾವುದೇ ಗಾಯದ ವರದಿಯಾಗಿಲ್ಲ. ಪ್ರಾಥಮಿಕ ಶೋಧದ ವೇಳೆ ಯಾವುದೇ ಅನುಮಾನಾಸ್ಪದ ಒಳನುಗ್ಗುವಿಕೆ ಅಥವಾ ಚಲನವಲನಗಳು ಕಂಡುಬಂದಿಲ್ಲ. ವಿಧಿವಿಜ್ಞಾನ ತಂಡವು ಸ್ಫೋಟವಾದ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿರುವುದರಿಂದ ಗುರುವಾರ ಬೆಳಗ್ಗೆ ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ