ಚೀನೀಯರ ಅತಿಥಿ ಗೃಹದ ಬಳಿ ಭಾರೀ ಸ್ಫೋಟ, ಗುಂಡಿನ ದಾಳಿ!
ಕಾಬೂಲ್ನ ಶಹರ್-ಇ ನಾವ್ ಪ್ರದೇಶದಲ್ಲಿ ಚೀನಾದ ಅತಿಥಿ ಗೃಹದ ಬಳಿ ಭಾರೀ ಸ್ಫೋಟ ಹಾಗೂ ಗುಂಡಿನ ದಾಳಿ ನಡೆದಿರುವುದಾಗಿ ನಿವಾಸಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ. ಆದರೆ ಭದ್ರತಾ ಅಧಿಕಾರಿಗಳು ಈ ಘಟನೆಯ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.
ವರದಿಗಳ ಪ್ರಕಾರ ತಾಲಿಬಾನ್ ಅಪ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಚೀನಾದ ವ್ಯಾಪಾರಸ್ಥರು ಕಾಬೂಲ್ನ ಜನಪ್ರಿಯ ಲಾಂಹನ್ ಹೋಟೆಲ್ಗೆ ತೆರಳುತ್ತಾರೆ. ಇಂದು ಹೋಟೆಲ್ಗೆ ಹಲವು ದಾಳಿಕೋರರು ನುಗ್ಗಿದ್ದು, ದಾಳಿ ನಡೆಸಿದ್ದಾರೆ ಎನ್ನಲಾಗಿದೆ.