ಪಾಕಿಸ್ತಾನದ ಜೊತೆ ಮಾತುಕತೆ ಮಾಡಿ ಎಂದ ಅಮೆರಿಕಾಗೆ ಒಂದೇ ಮಾತಲ್ಲಿ ಉತ್ತರ ಕೊಟ್ಟ ಸಚಿವ ಎಸ್ ಜೈಶಂಕರ್

Krishnaveni K

ಗುರುವಾರ, 1 ಮೇ 2025 (16:18 IST)
ನವದೆಹಲಿ: ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಾದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಬಂಧ ಸಂಪೂರ್ಣ ಹಳಸಿದೆ. ಇದರ ಬೆನ್ನಲ್ಲೇ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಮಾತುಕತೆ ಮಾಡಿ ಎಂದು ಸಲಹೆ ನೀಡಿದ್ದು ಇದಕ್ಕೆ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಒಂದೇ ಮಾತಿನಲ್ಲಿ ಉತ್ತರ ಕೊಟ್ಟಿದ್ದಾರೆ.

ಪಹಲ್ಗಾಮ್ ನಲ್ಲಿ ದಾಳಿಯಾದ ಬಳಿಕ ಪಾಕಿಸ್ತಾನದ ಜೊತೆ ರಾಜತಾಂತ್ರಿಕ ಸಂಬಂಧವನ್ನೆಲ್ಲಾ ಕಡಿದುಕೊಂಡಿರುವ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಇದರ ಬೆನ್ನಲ್ಲೇ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿ ಎಂದು ಸಲಹೆ ನೀಡಿದ್ದಾರೆ.

ಆದರೆ ಪ್ರಸ್ತುತ ಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟಿರುವ ವಿದೇಶಾಂಗ ಸಚಿವ ‘ಉಗ್ರ ದಾಳಿಗೆ ಕಾರಣರಾದವರನ್ನು, ಯೋಜನೆ ರೂಪಿಸಿದವರನ್ನು ಗುರುತಿಸಿ ತಕ್ಕ ಶಿಕ್ಷೆ ಕೊಡಿಸುವವರೆಗೆ ಮಾತುಕತೆ ಸಾಧ್ಯವಿಲ್ಲ’ ಎಂದು ಖಡಕ್ ಆಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ