ನೇಪಾಳ: ಸಾರ್ವತ್ರಿಕ ಚುನಾವಣೆಗೆ ಮುಹೂರ್ತ ಫಿಕ್ಸ್‌

Sampriya

ಶನಿವಾರ, 13 ಸೆಪ್ಟಂಬರ್ 2025 (19:49 IST)
Photo Credit X
ಕಠ್ಮಂಡು(ನೇಪಾಳ): ರಾಷ್ಟ್ರದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆ 2026ರ ಮಾರ್ಚ್‌ 5ರಂದು ನಡೆಯಲಿದೆ ಎಂದು ಅಧ್ಯಕ್ಷ ರಾಮಚಂದ್ರ ಪೌದೆಲ್‌ ಅವರ ಕಚೇರಿ ಘೋಷಿಸಿದೆ.

ಹಂಗಾಮಿ ಪ್ರಧಾನಿ ಸುಶೀಲಾ ಕಾರ್ಕಿ ಅವರ ಶಿಫಾರಸಿನಂತೆ ಶುಕ್ರವಾರ ತಡರಾತ್ರಿಯೇ ಸಂಸತ್ತನ್ನು ಅಧ್ಯಕ್ಷ ಪೌದೆಲ್‌ ವಿಸರ್ಜಿಸಿದ್ದರು.

ಈ ವಿಚಾರವಾಗಿ ಅಧ್ಯಕ್ಷರ ಕಚೇರಿ ಪ್ರಕಟನೆಯನ್ನು ಹೊರಡಿಸಿದೆ. 2025ರ ಸೆಪ್ಟೆಂಬರ್‌ 12ರ ರಾತ್ರಿ 11 ರಿಂದ ಅನ್ವಯವಾಗುವಂತೆ ಸಂಸತ್‌ ಅನ್ನು ವಿಸರ್ಜಿಸಲಾಗುತ್ತಿದ್ದು, 2026ರ ಮಾರ್ಚ್‌ 5ಕ್ಕೆ ಸಾರ್ವತ್ರಿಕ ಚುನಾವಣೆಯನ್ನು ನಿಗದಿ ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಳೆ ಸಂಪುಟ ರಚನೆ:

ಭಾನುವಾರ ನೂತನ ಹಂಗಾಮಿ ಪ್ರಧಾನಿ ಆಗಿರುವ ಸುಶೀಲಾ ಕಾರ್ಕಿ ಅವರು ಗೃಹ ಸಚಿವರು, ವಿದೇಶಾಂಗ ಹಾಗೂ ರಕ್ಷಣಾ ಸಚಿವರು ಸೇರಿದಂತೆ ಕೆಲವೇ ಸಚಿವರನ್ನು ಒಳಗೊಂಡ ಸಂಪುಟವನ್ನು ಭನಾಳೆ(ಭಾನುವಾರ) ರಚಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ