Nepal Violence: ಮೃತರ ಸಂಖ್ಯೆ 25ಕ್ಕೆ ಏರಿಕೆ, ಎಲ್ಲ ವಿಮಾನ ನಿಲ್ದಾಣ ಬಂದ್‌

Sampriya

ಬುಧವಾರ, 10 ಸೆಪ್ಟಂಬರ್ 2025 (16:38 IST)
Photo Credit X
ಕಠ್ಮಂಡು: ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಪರಿಣಾಮವಾಗಿ ಮೃತರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, ಬೇರೆ ಬೇರೆ ಘಟನೆಯಲ್ಲಿ 633 ಮಂದಿ ಗಾಯಗೊಂಡಿದ್ದಾರೆಂದು ಬುಧವಾರ ನೇಪಾಳ ಸಚಿವಾಲಯ ದೃಢಪಡಿಸಿದೆ. 

ದೇಶದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ತನ್ನ ವಶಕ್ಕೆ ಪಡೆದುಕೊಂಡಿದೆ ಎಂದು ವರದಿಯಾಗಿದೆ. 

ಇನ್ನೂ ಪ್ರತಿಭಟನೆಗಳು ಬುಧವಾರವೂ ವಿಕೋ‍ಪಕ್ಕೆ ತಿರುಗಿದ್ದರಿಂದ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಸ್ ಪಡೆಯಬೇಕು ಮತ್ತು ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ದೇಶವ್ಯಾಪಿ ನಡೆದ ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದ ಹಾಗೇ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. 

ಪೊಲೀಸರು ಕೈಗೊಂಡ ಕ್ರಮದಿಂದಾಗಿ ಸೋಮವಾರ 19 ಪ್ರತಿಭಟನಕಾರರು ಮೃತಪಟ್ಟ ಕಾರಣಕ್ಕೆ ಓಲಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಾವಿರಾರು ಪ್ರತಿಭಟನಕಾರರು ಅವರ ನಿವಾಸಕ್ಕೆ ನುಗ್ಗಿ, ಘೋಷಣೆಗಳನ್ನೂ ಕೂಗಿದ್ದರು. ಇದಾದ ಸ್ವಲ್ಪ ಹೊತ್ತಿನ ಬಳಿಕ ಓಲಿ ಅವರು ತಮ್ಮ ರಾಜೀನಾಮೆ ಘೋಷಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ