ಪ್ರತಿಭಟನೆಗಳ ನಡುವೆ ಶ್ರೀಲಂಕಾದಲ್ಲಿ ಹೊಸ ಕ್ಯಾಬಿನೆಟ್
17 ಸಚಿವರ ಹೊಸ ಸಂಪುಟದಲ್ಲಿ ಕೆಲವು ಹೊಸ ಹಾಗೂ ಯುವ ವ್ಯಕ್ತಿಗಳಿದ್ದು, ಇವರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶ್ರೀಲಂಕಾದಲ್ಲಿ ಇತ್ತೀಚೆಗೆ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಅಲ್ಲಿನ ಜನರು ಕಷ್ಟದ ದಿನಗಳನ್ನು ದೂಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಜನರು ತಿರುಗಿ ಬಿದ್ದಿದ್ದು, ಬೃಹತ್ ಪ್ರತಿಭಟನೆಯಿಂದಾಗಿ ಶ್ರೀಲಂಕಾದ ಎಲ್ಲಾ ಕ್ಯಾಬಿನೆಟ್ ಸದಸ್ಯರು ರಾಜೀನಾಮೆ ನೀಡಿದ್ದರು.