ಜನವರಿ 6ರಂದು ಉತ್ತರ ಕೊರಿಯಾದ ಜಲಜನಕ ಬಾಂಬ್ ಪರೀಕ್ಷೆ ನಡೆಸಿತ್ತು
.
ಪರೀಕ್ಷಾರ್ಥವಾಗಿ ನಡೆಸಿದ 'ಹೈಡ್ರೋಜನ್ ಬಾಂಬ್' ಸ್ಫೋಟ ಯಶಸ್ವಿಯಾಗಿದೆ ಎಂದು ಉತ್ತರ ಕೊರಿಯಾ ಹೇಳಿಕೊಂಡಿತ್ತು. . ಉತ್ತರ ಕೊರಿಯಾ ಹೈಡ್ರೋಜನ್ ಬಾಂಬ್ ಸಿಡಿಸಿದ್ದರ ಪರಿಣಾಮ ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.1ರಷ್ಟು ದಾಖಲಾಗಿರುವುದಾಗಿ ಅಮೆರಿಕ ಭೂವೈಜ್ಞಾನಿಕ ಸಮೀಕ್ಷಾ ಕೇಂದ್ರ ಮಾಹಿತಿ ನೀಡಿತ್ತು. ಇದರಿಂದ ಭೂಕಂಪ ಸಂಭವಿಸಿರಬಹುದೆಂದು ಭಾವಿಸಲಾಗಿತ್ತು. ಕೆಲವೇ ಕ್ಷಣಗಳಲ್ಲಿ ಉತ್ತರ ಕೊರಿಯಾ ಈ ಕುರಿತು ಸ್ಪಷ್ಟನೆ ನೀಡಿ, ಬೆಳಗ್ಗೆ 10 ಗಂಟೆ ಸುಮಾರಿಗೆ ಹೈಡ್ರೋಜನ್ ಬಾಂಬ್ ಪರೀಕ್ಷೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿತ್ತು.