ನೇಪಾಲದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಪ್ರಕರಣ ಪತ್ತೆ !

ಸೋಮವಾರ, 6 ಡಿಸೆಂಬರ್ 2021 (16:45 IST)
ಕಾಠ್ಮಂಡು : ನೇಪಾಳದ ಹಿಮಾಲಯ ರಾಷ್ಟ್ರದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ತಳಿ ಓಮಿಕ್ರಾನ್ ದೃಢಪಟ್ಟ ಮೊದಲ ಪ್ರಕರಣ ವರದಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನವೆಂಬರ್ 19 ರಂದು ವಿಮಾನದಲ್ಲಿ ಬಂದ 66 ವರ್ಷದ ವಿದೇಶಿ ಪ್ರಜೆಯೊಬ್ಬರಿಗೆ ಓಮಿಕ್ರಾನ್ ದೃಢಪಟ್ಟಿದ್ದು, ಅವರೊಂದಿಗೆ ಸಂಪರ್ಕ ಹೊಂದಿದ್ದ 71 ವರ್ಷದ ಮತ್ತೊಬ್ಬ ವ್ಯಕ್ತಿಗೂ ಓಮಿಕ್ರಾನ್ ದೃಢಪಟ್ಟಿದೆ. ಇದೀಗ ಇಬ್ಬರು ಸೋಂಕಿತರನ್ನು ಕ್ವಾರಂಟೈನ್ಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 
ಸೋಂಕಿತರಿಬ್ಬರೊಂದಿಗೂ ಸಂಪಕ್ ಹೊಂದಿದ್ದ ಇತರ 66 ಮಂದಿಗೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಿಗೆಲ್ಲಾ ನೆಗೆಟಿವ್ ವರದಿ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಸೋಂಕಿತರಿಬ್ಬರು ಸಹ  ಆರ್ಟಿಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಹೊಂದಿದ್ದರು ಮತ್ತು ಇಬ್ಬರು ಸಂಪೋರ್ಣ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ