ಅತ್ಯಾಚಾರಿ ಆರೋಪಿಗಳನ್ನು ರಾಸಾಯನಿಕದಲ್ಲಿ ಮುಳುಗಿಸಬೇಕು ಎಂದ ಪಾಕ್ ಪ್ರಧಾನಿ
ಬುಧವಾರ, 16 ಸೆಪ್ಟಂಬರ್ 2020 (08:14 IST)
ಪಾಕಿಸ್ತಾನ : ಅತ್ಯಾಚಾರಿ ಆರೋಪಿಗಳನ್ನು ರಾಸಾಯನಿಕದಲ್ಲಿ ಮುಳುಗಿಸಬೇಕು ಇಲ್ಲವೇ ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು ಎಂದು ಪಾಕಿಸ್ತಾನದ ಪ್ರಧಾನಿ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ಅತ್ಯಾಚಾರ ಪ್ರರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಕಾರಿನಲ್ಲಿದ್ದ ಮಹಿಳೆಯನ್ನು ಹೊರಗೆಳೆದು ತನ್ನ ಮಕ್ಕಳ ಮುಂದೆಯೇ ದರೋಡೆಕೋರರ ಗ್ಯಾಂಗ್ ವೊಂದು ಮಾನಭಂಗ ಎಸಗಿತ್ತು. ಈ ಬಗ್ಗೆ ಪಾಕಿಸ್ತಾನದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಈ ಬಗ್ಗೆ ಪ್ರಾದೇಶಿಕ ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಇಮ್ರಾನ್ ಖಾನ್, ಅತ್ಯಾಚಾರಿ ಆರೋಪಿಗಳನ್ನು ರಾಸಾಯನಿಕದಲ್ಲಿ ಮುಳುಗಿಸಬೇಕು ಇಲ್ಲವೇ ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು. ಆದರೆ ಇಯು ಪಾಕಿಸ್ತಾನಕ್ಕೆ ನೀಡಿರುವ ಜೆಎಸ್ಪಿಯನ್ನು ಗಮನದಲ್ಲಿಟ್ಟುಕೊಂಡು ಅಂತಹ ಕ್ರಮವು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ.