ಸರ್ಜಿಕಲ್ ಸ್ಟ್ರೈಕ್ ಮಾಡಿದ್ರೆ ತಕ್ಕ ಶಾಸ್ತಿ: ಭಾರತಕ್ಕೆ ಪಾಕ್ ಎಚ್ಚರಿಕೆ
ಶುಕ್ರವಾರ, 6 ಅಕ್ಟೋಬರ್ 2017 (19:07 IST)
ಪಾಕಿಸ್ತಾನದೊಳಗೆ ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸುವುದಾಗಲಿ ಅಥವಾ ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದಲ್ಲಿ ಇಸ್ಲಾಮಾಬಾದ್‌ನಿಂದ ಸಂಯಮವನ್ನು ನಿರೀಕ್ಷಿಸಬಾರದು. ದಾಳಿಗೆ ತಕ್ಕ ಉತ್ತರ ನೀಡುತ್ತೇವೆ ಎಂದು ಪಾಕಿಸ್ತಾನದ ರಾಯಭಾರಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಭಾರತದ ವಾಯು ಮುಖ್ಯಸ್ಥ ಮಾರ್ಷಲ್ ಬಿ. ಧನೊವಾ ಸಂಪೂರ್ಣ ಸ್ಪೆಕ್ಟ್ರಂ ಕಾರ್ಯಾಚರಣೆಗೆ ಸಿದ್ಧವಾಗಿದೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ವಿದೇಶಾಂಗ ಸಚಿವ ಖ್ವಾಜಾ ಆಸೀಫ್, ಪಾಕಿಸ್ತಾನ ತನ್ನ ನೆರೆಹೊರೆಯ ರಾಷ್ಟ್ರಗಳೊಂದಿಗೆ ಶಾಂತಿ ಮತ್ತು ಸಾಮರಸ್ಯದಿಂದ ಬದುಕಲು ಬಯಸುತ್ತದೆ ಎಂದು ತಿಳಿಸಿದ್ದಾರೆ.
ಒಂದು ವೇಳೆ, ಭಾರತ ಪಾಕಿಸ್ತಾನ ಪಾಕಿಸ್ತಾನದೊಳಗೆ ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸುವುದಾಗಲಿ ಅಥವಾ ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದಲ್ಲಿ ಇಸ್ಲಾಮಾಬಾದ್‌ನಿಂದ ಸಂಯಮವನ್ನು ನಿರೀಕ್ಷಿಸಬಾರದು ಎಂದು ಎಚ್ಚರಿಸಿದ್ದಾರೆ.
ವಾಷಿಂಗ್ಟನ್ ಮೂಲದ ಚಿಂತಕರ ತಂಡವಾದ ಯು.ಎಸ್ ಇನ್ಸ್ಟಿಟ್ಯೂಟ್ ಆಫ್ ಪೀಸ್ ಸಭೆಯಲ್ಲಿ ಮಾತನಾಡಿದ ಆಸಿಫ್, ಪ್ರಸ್ತುತ ಭಾರತದೊಂದಿಗಿನ ಸಂಬಂಧವು ಅತ್ಯಂತ ಕ್ಷೀಣ ಮಟ್ಟದಲ್ಲಿದೆ" ಎಂದು ಹೇಳಿದರು.
ಸಂಬಂಧವನ್ನು ಸುಧಾರಿಸಲು ಮಾಡಿದ ಪಾಕಿಸ್ತಾನದ ಪ್ರಯತ್ನಗಳಿಗೆ ಭಾರತ ಸೂಕ್ತವಾಗಿ ಸ್ಪಂದಿಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಕಾಶ್ಮೀರದಲ್ಲಿ ನಡೆಯುತ್ತಿರುವ ಘಟನೆಗಳು ಉಭಯ ದೇಶಗಳ ಮಾತುಕತೆಗೆ ಪ್ರಮುಖ ಅಡ್ಡಿಯಾಗಿವೆ ಎಂದು ಪಾಕಿಸ್ತಾನದ ವಿದೇಶಾಂಗ ಖಾತೆ ಸಚಿವ ಖ್ವಾಜಾ ಆಸೀಫ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.