ಭಾರತ ಉಗ್ರನನ್ನು ಪ್ರಧಾನಿಯಾಗಿ ಆಯ್ಕೆ ಮಾಡಿದೆ: ಪಾಕ್ ವಿದೇಶಾಂಗ ಸಚಿವ

ಮಂಗಳವಾರ, 3 ಅಕ್ಟೋಬರ್ 2017 (15:58 IST)
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಪಾಕಿಸ್ತಾನದ ರಾಜತಾಂತ್ರಿಕರ ನಡುವೆ ವಿಶ್ವಸಂಸ್ಥೆಯಲ್ಲಿ ಎದುರಾದ ಹಣಾಹಣಿಯ ಕೆಲ ದಿನಗಳ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವ ಖ್ವಾಜಾ ಆಸೀಫ್, ಭಾರತದ ಜನತೆ ಉಗ್ರನನ್ನು ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನ ಭಯೋತ್ಪಾದನೆಯನ್ನು ರಫ್ತು ಮಾಡುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ. ಯಾಕೆಂದರೆ ಭಾರತವನ್ನು ಉಗ್ರನೊಬ್ಬ ಆಳುತ್ತಿದ್ದಾನೆ ಎಂದು ಪರೋಕ್ಷವಾಗಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
 
ಆರೆಸ್ಸೆಸ್ ಭಯೋತ್ಪಾದಕ ಸಂಘಟನೆಯಾಗಿದ್ದು ದೇಶವನ್ನೇ ಆಳುತ್ತಿದೆ. ಬಿಜೆಪಿ, ಆರೆಸ್ಸೆಸ್ ಸಂಘಟನೆಯ ಕೇವಲ ಒಂದು ಭಾಗವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಉಗ್ರನನ್ನೇ ಪ್ರಧಾನಮಂತ್ರಿಯಾಗಿ ಆಯ್ಕೆ ಮಾಡುವಂತಹ ದೇಶದ ಬಗ್ಗೆ ನಾನು ಏನೂ ಹೇಳಲಿ? ಗೋರಕ್ಷಣೆಯ ನೆಪದಲ್ಲಿ ಮುಸ್ಲಿಮರು ದಲಿತರನ್ನು ಹತ್ಯೆ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.
 
ವಿಶ್ವಸಂಸ್ಥೆಯಲ್ಲಿ ಭಾರತದ ರಾಜತಾಂತ್ರಿಕ ಇನಮ್ ಗಂಭೀರ್ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಕೆಲ ದಿನಗಳ ನಂತರ ಪಾಕ್ ವಿದೇಶಾಂಗ ಸಚಿವ ಆಸೀಫ್ ಹೇಳಿಕೆ ಹೊರಬಿದ್ದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ