ಭಾರತವೇ ಕದನ ವಿರಾಮ ಉಲ್ಲಂಘಿಸುತ್ತಿದೆ: ವಿಶ್ವಸಂಸ್ಥೆಗೆ ಪಾಕಿಸ್ತಾನ ದೂರು

ಸೋಮವಾರ, 21 ನವೆಂಬರ್ 2016 (12:40 IST)
ಭಾರತೀಯ ಸೇನೆ ಕದನ ವಿರಾಮ ಉಲ್ಲಂಘಿಸುತ್ತಿದೆ ಎನ್ನುವ ದಾಖಲೆಗಳನ್ನು ಪಾಕಿಸ್ತಾನ, ವಿಶ್ವಸಂಸ್ಥೆಯ ಸೇನಾ ವೀಕ್ಷಕರ ಗುಂಪಿಗೆ ಹಸ್ತಾಂತರಿಸಿದೆ ಎಂದು ಮೂಲಗಳು ತಿಳಿಸಿವೆ.
 
ಭಾರತ ಮತ್ತು ಪಾಕಿಸ್ತಾನದ ವಿಶ್ವಸಂಸ್ಥೆಯ ಸೇನಾ ವೀಕ್ಷಕರ ಗುಂಪಿನ ಜನಪ್ರತಿನಿಧಿಗಳಿಗೆ ರಾವಲ್‌ಪಿಂಡಿಯಲ್ಲಿ ಪಾಕಿಸ್ತಾನ ನೀಡಿದೆ. ಭಾರತ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿನೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ.
 
ಎಲ್‌ಓಸಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘಿಸಿ ಮೂರು ಮಕ್ಕಳು ಸೇರಿದಂತೆ ನಾಲ್ವರು ನಾಗರಿಕರನ್ನು ಹತ್ಯೆ ಮಾಡಿದೆ ಎಂದು ಆರೋಪಿಸಿದ ಪಾಕಿಸ್ತಾನ ವಿಶ್ವಸಂಸ್ಥೆಗೆ ದೂರು ನೀಡಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ವಕ್ತಾರೆ ನಫೀಸಾ ಝಕಾರಿಯಾ ಮಾಹಿತಿ ನೀಡಿದ್ದಾರೆ. 
 
ವಿಶ್ವಸಂಸ್ಥೆಯಲ್ಲಿರುವ ಪಾಕಿಸ್ತಾನದ ರಾಯಭಾರಿ ಮಲೀಹಾ ಲೋಧಿ ಕೂಡಾ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿ ವಿಶ್ವಸಂಸ್ಥೆಯ ಮಹಾ ಪ್ರದಾನ ಕಾರ್ಯದರ್ಶಿ ಬಾನ್-ಕಿ-ಮೂನ್‌ಗೆ ಭೇಟಿ ಮಾಡಿ ದೂರು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ