ಪಾಕ್ ಪ್ರಧಾನಿ ನವಾಜ್ ದೋಷಿ, ಪಿಎಂ ಹುದ್ದೆಯಿಂದ ವಜಾ: ಸುಪ್ರೀಂಕೋರ್ಟ್

ಶುಕ್ರವಾರ, 28 ಜುಲೈ 2017 (12:52 IST)
ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಪನಾಮಾ ಪ್ರಕರಣದಲ್ಲಿ ಭ್ರಷ್ಟಾಚಾರವೆಸಗಿರುವುದು ಸಾಬೀತಾಗಿದ್ದರಿಂದ ಅವರು ದೋಷಿಯಾಗಿದ್ದಾರೆ. ಅವರನ್ನು ಕೂಡಲೇ ಪ್ರಧಾನಿ ಹುದ್ದೆಯಿಂದ ವಜಾಗೊಳಿಸಿ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.
 
ನವಾಜ್ ಷರೀಫ್ ವಿರುದ್ಧದ ಭ್ರಷ್ಟಾಚಾರದ ಆರೋಪ ಸಾಬೀಕಾಗಿದ್ದರಿಂದ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸುಪ್ರೀಂಕೋರ್ಟ್ ಸರಕಾರಕ್ಕೆ ಸೂಚನೆ ನೀಡಿದೆ.
 
ಪಾಕಿಸ್ತಾನದ ಪ್ರಧಾನಿ ಹುದ್ದೆಯಿಂದ ನವಾಜ್ ಷರೀಫ್ ಅವರನ್ನು ಅನರ್ಹಗೊಳಿಸಲಾಗಿದೆ. ಇದರಿಂದ ಷರೀಪ್ ಪ್ರಧಾನಿ ಹುದ್ದೆಯನ್ನು ತೆರವುಗೊಳಿಸಬೇಕಾದ ಅನಿವಾರ್ಯತೆ ಎದುರಾಗಿದೆ.
 
ನವಾಜ್ ಷರೀಫ್ ಕುಟುಂಬ ಪನಾಮಾ ಪೇಪರ್ ಹಗರಣದಲ್ಲಿ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರವೆಸಗಿ ಅಕ್ರಮ ಹಣ ಸಂಪಾದಿಸಿರುವುದು ಬಹಿರಂಗವಾಗಿದೆ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ