ಪಾಕ್ ರಾಜಕೀಯ ಪಕ್ಷಗಳು ಉಗ್ರರನ್ನು ಬೆಂಬಲಿಸ್ತಿವೆ: ಪಾಕ್ ಮುಖ್ಯ ನ್ಯಾಯಮೂರ್ತಿ

ಸೋಮವಾರ, 19 ಸೆಪ್ಟಂಬರ್ 2016 (20:08 IST)
ಪಾಕಿಸ್ತಾನದ ಕೆಲ ರಾಜಕೀಯ ಪಕ್ಷಗಳು ಸ್ವಹಿತಾಸಕ್ತಿಗಾಗಿ ಭಯೋತ್ಪಾದಕರನ್ನು ಬೆಂಬಲಿಸುತ್ತಿವೆ ಎಂದು ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಅನ್ವರ್ ಝಹೀರ್ ಜಮಾಲಿ ಗಂಭೀರ ಆರೋಪ ಮಾಡಿದ್ದಾರೆ.
 
ನ್ಯಾಯಮೂರ್ತಿ ಜಮಾಲಿ ಪಾಕಿಸ್ತಾನದ ಖಾಸಗಿ ಟಿವಿ ಚಾನೆಲ್‌ನೊಂದಿಗೆ ಮಾತನಾಡಿ, ಕೆಲ ರಾಜಕೀಯ ಪಕ್ಷಗಳು ಸ್ವಹಿತಾಸಕ್ತಿಗಾಗಿ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವುದು ಅಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ.
 
ಪಾಕಿಸ್ತಾನದಲ್ಲಿ ಅಂತರಿಕ ಸಮಸ್ಯೆಗಳಿಂದಾಗಿ ಭಯೋತ್ಪಾದನೆ ಹೆಚ್ಚಾಗುತ್ತಿದೆ. ಉಗ್ರರು ವಕೀಲರು ಮತ್ತು ನ್ಯಾಯಮೂರ್ತಿಗಳಲ್ಲಿ ಭಯ ಹುಟ್ಟಿಸಲು ಕೋರ್ಟ್‌ಗಳ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮುಂದುವರಿದು ಮಾತನಾಡಿದ ಅವರು, ಪಾಕ್ ಸರಕಾರ ಮತ್ತು ಇತರ ಭದ್ರತಾ ಏಜೆನ್ಸಿಗಳು ದೇಶದ ಸ್ಥಿರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
 
ಏತನ್ಮಧ್ಯೆ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಪರಿಕ್ಕರ್ ಮತ್ತು ಇತರ ಉನ್ನತ ಅಧಿಕಾರಿಗಳು ಗಡಿ ರೇಖೆಯಲ್ಲಿರುವ ಪ್ರದೇಶಗಳು ಮತ್ತು ಜಮ್ಮು ಕಾಶ್ಮಿರ ಪರಿಸ್ಥಿತಿಯನ್ನು ಅವಲೋಕನ ನಡೆಸಿದರು.
 
ರಾಷ್ಟ್ರೀಯ ಭಧ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಸುಹಾಗ್ ಮತ್ತು ಇತರ ಉನ್ನತ ಅಧಿಕಾರಿಗಳು ಸಭೆ ನಡೆಸಿ ಮುಂಬರುವ ದಿನಗಳಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ