ಪಾಕ್ ಪ್ರಧಾನಿ ನವಾಜ್ ಷರೀಫ್‌ಗೆ ಸಂಸತ್ತಿನಲ್ಲಿ ಛೀಮಾರಿ

ಬುಧವಾರ, 24 ಮೇ 2017 (13:40 IST)
ಭಾರತೀಯ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಕೋರ್ಟ್‌ನಲ್ಲಿ ಪಾಕಿಸ್ತಾನ ಮುಖಭಂಗ ಅನುಭವಿಸಲು ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಕಾರಣ ಎಂದು ಸಂಸತ್ ಛೀಮಾರಿ ಹಾಕಿದೆ.
 
ಅಂತಾರಾಷ್ಟ್ರೀಯ ಕೋರ್ಟ್‌ನಲ್ಲಿ ಪಾಕಿಸ್ತಾನಕ್ಕೆ ಹಿನ್ನೆಡೆಯಾಗಲು ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ಬೇಜವಾಬ್ದಾರಿ ವರ್ತನೆಯೇ ಹೊಣೆಯಾಗಿದೆ ಎಂದು ಸಂಸತ್ತಿನಲ್ಲಿ ಆಕ್ರೋಶ ವ್ಯಕ್ತವಾಗಿದೆ.
 
ಮಾಜಿ ಕ್ರಿಕೆಟಿಗ, ರಾಜಕಾರಣ ಇಮ್ರಾನ್ ಖಾನ್ ಪಾಕಿಸ್ತಾನದ ಹಿನ್ನೆಡೆಗೆ ನೇರವಾಗಿ ಷರೀಫ್ ಕಾರಣವಾಗಿದ್ದಾರೆ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
 
ಅಂತಾರಾಷ್ಟ್ರೀಯ ಸಮುದಾಯದಲ್ಲಿ ಪಾಕಿಸ್ತಾನದ ಗೌರವಕ್ಕೆ ಕುಂದುಂಟಾಗಲು ಪ್ರಧಾನಿ ನವಾಜ್ ಷರೀಫ್ ಕಾರ್ಯವೈಖರಿ ಕಾರಣವಾಗಿದೆ ಎಂದು ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ