ಚೀನಾಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ಶುಕ್ರವಾರ, 9 ಜೂನ್ 2017 (12:59 IST)
ಅಸ್ತಾನಾ:ಭಾರತಕ್ಕೆ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಸದಸ್ಯತ್ವ ನೀಡಿದ್ದಕ್ಕಾಗಿ ಚೀನಾ  ಅಧ್ಯಕ್ಷ  ಕ್ಸಿ ಜಿನ್ ಪಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಹೇಳಿದ್ದಾರೆ.
 
ಕಜಕಿಸ್ತಾನದ ಆಸ್ತಾನಾದಲ್ಲಿ ಆರಂಭವಾಗಿರುವ ಎಸ್‌ಸಿಒ ಶೃಂಗ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ಎಸ್‌ಸಿಒ ಸದಸ್ಯತ್ವ ನೀಡಿದ್ದಕ್ಕೆ ಧನ್ಯವಾದ ಹೇಳಿದರು. ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್  ಹಾಗೂ ಪ್ರಧಾನಿ ಮೋದಿ ಅವರು ಪರಸ್ಪರ ಶಭಾಶಯ ವಿನಿಮಯ  ಮಾಡಿಕೊಂಡರು. ಶೃಂಗಸಭೆಯಲ್ಲಿ ಮಧ್ಯ ಏಷ್ಯಾದ ಪ್ರಮುಖ ರಾಷ್ಟ್ರಗಳ ನಾಯಕರು ಒಟ್ಟು ಗೂಡಿದ್ದಾರೆ.
 
ಈ ವೇಳೆ ಮಾತನಾಡಿದ ಪ್ರಧಾನಿ ಭಯ ದೇಶಗಳು ಪ್ರಗತಿಯತ್ತ ಮುಖ ಮಾಡಿದ್ದು, ಪ್ರಮುಖ ಕ್ಷೇತ್ರಗಳಲ್ಲಿ ಸಾಕಷ್ಟು ಶ್ರಮಪಟ್ಟು ಅಭಿವೃದ್ಧಿ ಸಾಧಿಸಿದ್ದೇವೆ. ಎರಡೂ ದೇಶಗಳ ಯುವಜನತೆ ಸಕಾರಾತ್ಮಕ ಭವಿಷ್ಯವನ್ನು ಎದುರು ನೋಡುತ್ತಿದ್ದು,  ಸಾಕಷ್ಚು ಕ್ಷೇತ್ರಗಳಲ್ಲಿ ಸುಧಾರಣೆ ಅಗತ್ಯವಾಗಿದೆ. ಭಾರತ ಕೈಗೊಂಡ ಸುಧಾರಣಾ ಕ್ರಮಗಳು ಫಲ ನೀಡುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಆರ್ಥಿಕತೆಯಲ್ಲಿ ಸುಧಾರಣೆ ಕಂಡುಬರುತ್ತಿದೆ ಎಂದು  ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
 

ವೆಬ್ದುನಿಯಾವನ್ನು ಓದಿ