ಬಾಂಗ್ಲಾದೇಶದಲ್ಲಿ ಪ್ರಧಾನಿ ಮೋದಿ: ಕೊರೋನಾ ಬಳಿಕ ಮೊದಲ ಫಾರಿನ್ ಟೂರ್

ಶುಕ್ರವಾರ, 26 ಮಾರ್ಚ್ 2021 (10:43 IST)
ನವದೆಹಲಿ: ಕೊರೋನಾ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ವಿದೇಶ ಪ್ರವಾಸ ಮಾಡಿದ್ದಾರೆ. ಎರಡು ದಿನಗಳ ಕಾಲ ಬಾಂಗ್ಲಾದೇಶದಲ್ಲಿರಲಿದ್ದಾರೆ.


ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಜೊತೆಗೆ ಪ್ರಧಾನಿ ಮೋದಿ ಫಲಪ್ರದ ಮಾತುಕತೆ ನಡೆಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಾಂಗ್ಲಾ ಅಧ್ಯಕ್ಷ ಅಬ್ದುಲ್ ಹಮೀದ್ ಅವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಇಂದಿನ ದಿನವಿಡೀ ಪ್ರಧಾನಿ ಮೋದಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯವಾಗಿ ರಾಷ್ಟ್ರೀಯ ಹುತಾತ್ಮ ಸ್ಮಾರಕ ಬಳಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಭೇಟಿ ಉಭಯ ದೇಶಗಳ ಬಾಂಧವ್ಯ ಮತ್ತಷ್ಟು ವೃದ್ಧಿಸಬಹುದು ಎಂಬ ವಿಶ್ವಾಸದಲ್ಲಿ ಪ್ರಧಾನಿ ಮೋದಿ ಇದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ