ಬುದ್ಧ ಜಯಂತಿಯಂದು ಮೋದಿ ಮಾಯಾದೇವಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದು, ಬೌದ್ಧ ಸಂಸ್ಕೃತಿ ಹಾಗೂ ಪರಂಪರೆಯ ಅಂತಾರಾಷ್ಟ್ರೀಯ ಕೇಂದ್ರದ ಶಿಲಾನ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ನೇಪಾಳದ ಪ್ರಧಾನಿ ಶೇರ್ ಬಹಾದ್ದೂರ್ ದೇವುಬಾ ಅವರೊಂದಿಗೆ ಜಲವಿದ್ಯುತ್, ಸಂಪರ್ಕ ಕ್ಷೇತ್ರದ ಅಭಿವೃದ್ಧಿಗಾಗಿ ಎರಡೂ ದೇಶಗಳ ನಡುವಿನ ಸಹಕಾರ ವಿಸ್ತರಣೆಯ ಕುರಿತು ಚರ್ಚೆ ನಡೆಸುವುದಾಗಿ ಮೋದಿ ಹೇಳಿದ್ದಾರೆ.
2014ರಿಂದ ಇದು ಮೋದಿ ಅವರ 5ನೇ ನೇಪಾಳ ಭೇಟಿಯಾಗಿದೆ. ಈ ಭೇಟಿಯ ವೇಳೆ ಅವರು ಮಾಯಾದೇವಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನೇಪಾಳ ಸರ್ಕಾರ ಮತ್ತು ಲುಂಬಿನಿ ಅಭಿವೃದ್ಧಿ ಟ್ರಸ್ಟ್ ಏರ್ಪಡಿಸಿರುವ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಆವರು ಭಾಷಣ ಮಾಡಲಿದ್ದಾರೆ. ದೆಹಲಿಯ ಅಂತಾರಾಷ್ಟ್ರೀಯ ಬುದ್ದಿಶ್‌್ಟಕಾನ್ಫೆಡರೇಶನ್‌ಗೆ ಸೇರಿದ ಜಾಗದಲ್ಲಿ ಸಂಸ್ಕೃತಿ ಮತ್ತು ಪರಂಪರೆ ಕೇಂದ್ರ ಸ್ಥಾಪನೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.