ಪ್ರಧಾನಿ ಮೋದಿಗೆ ಗಯಾನದ ಅತ್ಯುನ್ನತ ನಾಗರಿಕ ಪ್ರಶಸ್ತಿ

Krishnaveni K

ಗುರುವಾರ, 21 ನವೆಂಬರ್ 2024 (10:02 IST)
Photo Credit: X
ನವದೆಹಲಿ: ಗಯಾನಗೆ ಐತಿಹಾಸಿಕ ಭೇಟಿ ನೀಡಿರುವ ಪ್ರಧಾನಿ ಮೋದಿಗೆ ಅಲ್ಲಿನ ಅತ್ಯುನ್ನತ ನಾಗರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಗಯಾನದ ಆರ್ಡರ್ ಆಫ್ ಎಕ್ಸಲೆನ್ಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

56 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಯಾನಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಆ ದೇಶದ ಅತ್ಯುನ್ನತ ಗೌರವ ನೀಡಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಈ ಉನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ನನ್ನ ಸ್ನೇಹಿತ ಇರ್ಫಾನ್ ಅಲಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.

ಈ ಗೌರವ ಭಾರತದ 140 ಕೋಟಿ ಜನರಿಗೆ ಸಂದಿರುವ ಗೌರವ. ನಮ್ಮ ಸಂಬಂಧದ ಆಳಕ್ಕೆ ಈ ಗೌರವ ಸಾಕ್ಷಿಯಾಗಿದೆ. ಇದು ನಮಗೆ ಇನ್ನಷ್ಟು ಸ್ಪೂರ್ತಿಯಾಗಿರುತ್ತದೆ ಎಂದು ಮೋದಿ ಹೇಳಿದ್ದಾರೆ. ಭಾರತ ಮತ್ತು ಗಯಾನ ನಡುವೆ ಸಾಕಷ್ಟು ಸಾಮ್ಯತೆಗಳಿವೆ ಎಂದು ಮೋದಿ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಈ ಹಿಂದೆ ಮೋದಿಗೆ ಡೊಮಿನಿಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಸಿಕ್ಕಿತ್ತು. ಇದಕ್ಕೆ ಮೊದಲು ರಷ್ಯಾ ಪ್ರವಾಸ ಮಾಡಿದ್ದಾಗ ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್’ ನೀಡಿ ಗೌರವಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ