ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನಕ್ಕೆ ಮನೆಗೆ ಪೊಲೀಸರ ದಂಡು?

ಬುಧವಾರ, 15 ಮಾರ್ಚ್ 2023 (10:17 IST)
ಇಸ್ಲಾಮಾಬಾದ್ : ತೋಶಾ-ಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸುವಂತೆ ನ್ಯಾಯಾಲಯ ಆದೇಶಿಸಿದ್ದು, ಬಂಧನಕ್ಕೆ ಅವರ ನಿವಾಸದೆದುರು ಪೊಲೀಸರ ದಂಡೇ ಬೀಡು ಬಿಟ್ಟಿದೆ.
 
ಲಾಹೋರ್ನಲ್ಲಿರುವ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಧ್ಯಕ್ಷ ಇಮ್ರಾನ್ ಖಾನ್ ಅವರ ನಿವಾಸದ ಹೊರಗೆ ಶಸ್ತ್ರಸಜ್ಜಿತ ಪೊಲೀಸ್ ವಾಹನಗಳು ಬೀಡುಬಿಟ್ಟಿರುವ ದೃಶ್ಯ ಕಂಡುಬಂದಿದೆ. 

ತಮ್ಮ ನಾಯಕನ ಬಂಧನಕ್ಕೆ ಪಿಟಿಐ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರು. ಇಮ್ರಾನ್ ಖಾನ್ ನಿವಾಸದ ಬಳಿ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ಜಲಫಿರಂಗಿ ಮತ್ತು ಅಶ್ರುವಾಯು ಬಳಸಿ ಬೆಂಬಲಿಗರನ್ನು ಪೊಲೀಸರು ಚದುರಿಸಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಲಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ