ಪುಟಿನ್ : ದೃಷ್ಟಿ ಮಂಜಾಗ್ತಿದೆ, ಕೈ-ಕಾಲು ಸ್ವಾಧೀನ ಕಳೆದುಕೊಳ್ತಿದೆ

ಬುಧವಾರ, 12 ಏಪ್ರಿಲ್ 2023 (11:51 IST)
ಮಾಸ್ಕೋ : ಕಳೆದ ವರ್ಷದಿಂದ ಉಕ್ರೇನ್ ವಿರುದ್ಧ ಯುದ್ಧ ಸಾರಿದಾಗಿನಿಂದಲೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆರೋಗ್ಯ ವಿಚಾರ ನಿರಂತರ ಚರ್ಚೆಯಲ್ಲಿದೆ. ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ವರದಿ ಬಿಡುಗಡೆಯಾಗಿದ್ದು, ಪುಟಿನ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಹೇಳಲಾಗಿದೆ.
 
ಪುಟಿನ್ಗೆ ಅತಿಯಾದ ತಲೆನೋವು, ದೃಷ್ಟಿ ಮಂಜಾಗುವುದು ಹಾಗೂ ನಾಲಿಗೆಯಲ್ಲಿ ಮರಗಟ್ಟುವಿಕೆ ಉಂಟಾಗುತ್ತಿದೆ ಎಂದು ವೈದ್ಯರು ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪುಟಿನ್ ಈಗಾಗಲೇ ಬಲಗೈ ಮತ್ತು ಬಲಗಾಲಿನ ಭಾಗಶಃ ಸ್ವಾಧೀನ ಕಳೆದುಕೊಳ್ಳುತ್ತಿದ್ದಾರೆ, ಅವರಿಗೆ ತುರ್ತು ವೈದ್ಯಕೀಯ ಆರೈಕೆ ಅಗತ್ಯವಿದೆ ಎಂದು ಹೇಳಿದ್ದಾರೆ. ಆದ್ರೆ ಕ್ರೆಮ್ಲಿನ್ ಮತ್ತು ರಷ್ಯಾದ ಆರೋಗ್ಯ ಸಚಿವರು ಪುಟಿನ್ ಆರೋಗ್ಯವಾಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆಯೇ ವೈದ್ಯರು ಕೌನ್ಸಿಲಿಂಗ್ ಮಾಡಿ, ಔಷಧಿ ತೆಗೆದುಕೊಂಡು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಆದರೆ ಪುಟಿನ್ ವಿಶ್ರಾಂತಿ ಪಡೆಯಲು ನಿರಾಕರಿಸಿ, ಉಕ್ರೇನ್ ವಿರುದ್ಧ ಯುದ್ಧದ ಬೆಳವಣಿಗೆಯಲ್ಲಿ ತೊಡಗಿಕೊಂಡರು. ಅವರು ಕೊಂಚ ಸುಧಾರಿಸಿಕೊಳ್ಳುತ್ತಿದ್ದಂತೆಯೇ ವೈದ್ಯರ ಆರೈಕೆ ಬಗ್ಗೆ ನಿರ್ಲಕ್ಷ್ಯ ತೋರಿದರು ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ