ಪ್ರಧಾನ ಮಂತ್ರಿ ಸ್ಥಾನಕ್ಕೆ ರನಿಲ್ ವಿಕ್ರಮಸಿಂಘೆ ರಾಜೀನಾಮೆ

ಭಾನುವಾರ, 10 ಜುಲೈ 2022 (10:02 IST)
ಕೊಲಂಬೊ : ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾದಲ್ಲಿ ಜನತೆ ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದ್ದು, ದೇಶದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.
 
ದ್ವೀಪ ರಾಷ್ಟ್ರ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಅಧ್ಯಕ್ಷರ ಭವನಕ್ಕೆ ನುಗ್ಗಿ ಜನರು ದಾಂಧಲೆ ನಡೆಸಿದರು. ಇದರ ಬೆನ್ನಲ್ಲೇ ರನಿಲ್ ವಿಕ್ರಮಸಿಂಘೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದಲ್ಲಿ ಅರಾಜಕತೆ ವಾತಾವರಣ ಸೃಷ್ಟಿಯಾಗಿದೆ. ದೇಶದ ಜನತೆ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ.

ಪರಿಣಾಮವಾಗಿ ಮಹಿಂದಾ ರಾಜಪಕ್ಸೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ ರನಿಲ್ ವಿಕ್ರಮಸಿಂಘೆ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಆರ್ಥಿಕ ದುಸ್ಥಿತಿಯಿಂದ ಕಂಗೆಟ್ಟಿರುವ ದೇಶಕ್ಕೆ ಅನೇಕ ಕಡೆಯಿಂದ ಸಾಲ ಹಾಗೂ ಇನ್ನಿತರ ಸೌಲಭ್ಯಕ್ಕಾಗಿ ರನಿಲ್ ಪ್ರಯತ್ನಿಸಿದರು. ಆದರೆ ಆಡಳಿತದಲ್ಲಿ ಸುಧಾರಣೆ ತರುವುದು ಕಷ್ಟ ಎಂಬುದನ್ನು ಅರಿತು ರಾಜೀನಾಮೆ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ