ಇಲಿ ಕೊಲ್ಲುವವರಿಗೆ ತಿಂಗಳಿಗೆ ಕೋಟಿಗಟ್ಟಲೇ ಸಂಬಳ!?

ಸೋಮವಾರ, 5 ಡಿಸೆಂಬರ್ 2022 (10:22 IST)
ನ್ಯೂಯಾರ್ಕ್ : ಇಲಿ ಕಾಟವನ್ನು ತಾಳಲಾರದೇ ನ್ಯೂಯಾರ್ಕ್ ಸಿಟಿ ಮೇಯರ್ರೊಬ್ಬರು ಇಲಿ ಕೊಲ್ಲಲು ಜನರನ್ನು ನೇಮಿಸುವುದಾಗಿ ಆಹ್ವಾನಿಸಿರುವ ಜಾಹಿರಾತನ್ನು ಹಾಕಿರುವ ವಿಚಿತ್ರ ಘಟನೆ ನಡೆದಿದೆ.

ನ್ಯೂಯಾರ್ಕ್ ನಗರದಲ್ಲಿ ಸುಮಾರು 1.8 ಕೋಟಿ ಇಲಿಗಳು ಇವೆ ಎಂದು ವರದಿಯಾಗಿತ್ತು. ಇದಾದ ಬಳಿಕ, ನ್ಯೂಯಾರ್ಕ್ ಸಿಟಿ ಮೇಯರ್ ಎರಿಕ್ ಆಡಮ್ಸ್ ಇಲಿಯನ್ನು ಕೊಲ್ಲಲು ಜನರನ್ನು ನೇಮಿಸುವುದಾಗಿ ಜಾಹೀರಾತು ನೀಡಿದ್ದಾರೆ. ಅಷ್ಟೇ ಅಲ್ಲದೆ ಇವರಿಗೆ ಸಂಬಳವನ್ನು ನಿಗದಿ ಪಡಿಸಿದ್ದಾರೆ.

ಇಲಿಯನ್ನು ಸಾಯಿಸಲು ಚಾಣಾಕ್ಷ್ಯತನವನ್ನು ಹೊಂದಿರಬೇಕು. ಆಯ್ಕೆಯಾದ ಸಿಬ್ಬಂದಿಯೂ ವಾರದ 7 ದಿನವೂ ಕೆಲಸ ಮಾಡಬೇಕು. ಜೊತೆಗೆ ದಿನದ 24 ಗಂಟೆಗಳ ಕೆಲಸ ಮಾಡಬೇಕು.

ನಗರದ ಜನರೊಂದಿಗೆ ಉತ್ತಮ ಸಂಪರ್ಕ ಸಾಧಿಸಿ ಉತ್ಸಾಹದಿಂದ ಸಮಾಜದ ಕಡೆಗೆ ಸಕಾರಾತ್ಮಕ ದೃಷ್ಟಿಕೋನದಿಂದ ಕೆಲಸ ಮಾಡಬೇಕು. ಇದರಿಂದ 80 ಲಕ್ಷ ನಿವಾಸಿಗಳು ಇಲಿಗಳ ಸಮಸ್ಯೆಯಿಂದ ಪಾರಾಗಬಹುದು. ಒಂದು ವೇಳೆ ಇಲಿಯನ್ನು ಸಾಯಿಸಲು ಯಶಸ್ವಿಯಾದರೆ 1,70,000 ಡಾಲರ್ನ್ನು ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ. ಅಂದರೆ ಬರೋಬ್ಬರಿ 1,38,41,663 ರೂ. ಹಣವಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ