ದೇಶದಲ್ಲಿ ಇನ್ನೂ ಎಲ್ಲರೂ ಸಮಾನರು ಎಂಬ ಕಾಲ ಬಂದಿಲ್ಲ. ಅಂಥ ಸಂದರ್ಭ ಬಂದಾಗ ಮೀಸಲಾತಿ ರದ್ದು ಮಾಡುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಲಿದೆ ಎಂದು ರಾಹುಲ್ ಹೇಳಿದ್ದಾರೆ. ರಾಹುಲ್ ಹೇಳಿಕೆಗೆ ಬಿಜೆಪಿ, ಬಿಎಸ್ ಪಿ, ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹಿಂದುಳಿದ ವರ್ಗದವರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
ಶೇ.90 ಮಂದಿ ಬುಡಕಟ್ಟು ಜನಾಂಗ, ದಲಿತರು, ಆದಿವಾಸಿಗಳನ್ನು ಪ್ರತಿನಿಧಿಸುವವರು ಯಾರೂ ಇಲ್ಲ. ಹೀಗಾಗಿಯೇ ಭಾರತದಲ್ಲಿ ಜಾತಿಗಣತಿ ನಡೆಸಲು ನಾವು ಆಗ್ರಹಿಸುತ್ತೇವೆ. ಇದಕ್ಕೆ ಜನರ ಸಹಮತವೂ ಇದೆ. ಆ ಮೂಲಕ ಭಾರತದ ಸಾಮಾಜಿಕ ಸ್ಥಿತಿಯನ್ನು ನಾವು ಅರಿಯುತ್ತೇವೆ. ಸಮಾಜದಲ್ಲಿ ಸಮಾನತೆ ಬಂದಾಗ ಮೀಸಲಾತಿ ರದ್ದು ಮಾಡಬಹುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ನವರ ನಾಟಕ ಬಯಲಾಗಿದೆ. ಇದೇ ವಿಷಯವನ್ನು ಇಟ್ಟುಕೊಂಡ ಕಾಂಗ್ರೆಸ್ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದು ಕಾಂಗ್ರೆಸ್ ನ ಮನಸ್ಥಿತಿ. ಮೀಸಲಾತಿಯನ್ನು ಅಂತ್ಯಗೊಳಿಸುವುದು ಸಹ ಅಪರಾಧ ಎಂದು ಎಲ್ ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಕಿಡಿ ಕಾರಿದ್ದಾರೆ. ಪ್ರತೀ ಬಾರಿ ವಿದೇಶಕ್ಕೆ ಹೋದಾಗಲೂ ಅಲ್ಲಿ ಭಾರತವನ್ನು ಅವಮಾನಿಸುವ ಕೆಲಸವನ್ನು ರಾಹುಲ್ ಮಾಡುತ್ತಿದ್ದಾರೆ. ಇದು ರಾಷ್ಟ್ರವಿರೋಧಿ ಕೃತ್ಯ ಎಂದು ಬಿಜೆಪಿ ಟೀಕಿಸಿದೆ.